ಮೈಸೂರು: ನನಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ ಎನ್ನುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿಎಂ ಆಗಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದಾರೆ.
ಸಿ.ಟಿ.ರವಿ ಮುಂದಿನ ಸಿಎಂ ಎಂಬ ಕಾರ್ಯಕರ್ತರ ಹೇಳಿಕೆ ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಸಿ.ಟಿ ರವಿ, ನಾನು ಸಿಎಂ ಆಗಬೇಕೆಂದು ಕ್ಷೇತ್ರದಲ್ಲಿ ಮಾತ್ರ ಕೂಗು ಕೇಳಿಬರುತ್ತಿದೆ. ರಾಜ್ಯದೆಲ್ಲೆಡೆ ಈ ಕೂಗು ಕೇಳಿದಾಗ ಸಿಎಂ ಮಾಡುವಂತೆ ಕೇಳುತ್ತೇನೆ ಎಂದು ತಿಳಿಸಿದರು.
ಹಳೆ ಬೇರು, ಹೊಸ ಚಿಗುರು ಮಾದರಿಯಲ್ಲಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಬಡವರಿಂದ ಮೇಧಾವಿಗಳವರೆಗೂ ರಾಜಕೀಯದಲ್ಲಿ ಪ್ರಾತಿನಿಧ್ಯ ನೀಡಲಾಗಿದೆ. ನಮ್ಮ ಸರ್ಕಾರ ಎಸ್ ಸಿ, ಎ ಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. ಸ್ಪಷ್ಟ ಬಹುಮತ ನೀಡಿ ಸರ್ಕಾರ ರಚನೆಗೆ ಅವಕಾಶ ಕೊಡಿ ಎಂದು ಸಿ.ಟಿ ರವಿ ಮನವಿ ಮಾಡಿದರು.














