ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಬಿಜೆಪಿ ಪಕ್ಷದಲ್ಲಿ ಯಾರೊಂದಿಗೂ ಚರ್ಚಿಸಿಲ್ಲ. ಮೈತ್ರಿಯಾಗುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದ್ದಾರೆ.
ಅಲ್ಲದೇ ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿಯಾದ ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.