ಮನೆ ರಾಜ್ಯ ನಾನು ದಾವಣಗೆರೆ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ: ಎಂ.ಪಿ.ರೇಣುಕಾಚಾರ್ಯ

ನಾನು ದಾವಣಗೆರೆ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ: ಎಂ.ಪಿ.ರೇಣುಕಾಚಾರ್ಯ

0

ಚಿತ್ರದುರ್ಗ: ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದು ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳ ಮಾತನಾಡಿರುವ ರೇಣುಕಾಚಾರ್ಯ, ಬೇರೆಯವರನ್ನು ಟೀಕೆ ಮಾಡಲು ನಮಗೆ ಯಾವ ನೈತಿಕತೆ ಇದೆ. ಮೊದಲು ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರ ಆಯ್ಕೆ ಮಾಡಲಿ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ನೋವಿನಿಂದ ಮಾತನಾಡುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷ ನಾಯಕರ ಆಯ್ಕೆ ಆಗಲಿ ಎಂದರು.

ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್​ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನಮ್ಮದೇ ಪಕ್ಷದ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಸೋಲಿಗೆ ನಾಯಕರ ದೌರ್ಬಲ್ಯ ಕಾರಣ. ಬಿಜೆಪಿ ಕಾರ್ಯಕರ್ತರನ್ನೇ ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷ ನಾಯಕರ ಆಯ್ಕೆ ಆಗಲಿ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ನೋವಿನಿಂದ ಮಾತನಾಡುತ್ತಿದ್ದಾರೆ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಗುಡುಗಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ಬಗ್ಗೆ ಮಾತನಾಡಿ, ಜೆಡಿಎಸ್​, ಬಿಜೆಪಿ ಮೈತ್ರಿಗೆ ವಿರೋಧ ಮಾಡಲ್ಲ. ಆದ್ರೆ, ಮೈತ್ರಿ ಎಂದರೆ ಕಾರ್ಯಕರ್ತರ ನಡುವೆ ಸಾಮರಸ್ಯ ಇರಬೇಕು. ಆದ್ರೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಆಗುತ್ತಿದೆ. ಬಿಜೆಪಿ ಕಾರ್ಯಕರ್ತರು ಜೆಡಿಎಸ್, ಕಾಂಗ್ರೆಸ್ ವಿರೋಧಿಸಿಕೊಂಡು ಬಂದಿದ್ದಾರೆ. ಈ ಹಿಂದೆ ಜೆಡಿಎಸ್​ ನವರು ವಚನ ಭ್ರಷ್ಟರು ಎಂದು ನಾವೇ ಹೇಳಿದ್ದೆವು. ಅಂತಹವರ ಜೊತೆ ಯಾವ ರೀತಿ ಮೈತ್ರಿ ಎಂದು ಜನ ಕೇಳುತ್ತಿದ್ದಾರೆ. ರಾಜ್ಯ ನಾಯಕರನ್ನು ಹೊರಗಿಟ್ಟು ಮೈತ್ರಿಯಾದ್ರೆ ಅಪೂರ್ಣ ಆಗುತ್ತದೆ. ಯಡಿಯೂರಪ್ಪ ಸೇರಿ ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಪರೋಕ್ಷವಾಗಿ ಹೈಕಮಾಂಡ್​ ನಾಯಕರಿಗೆ ತಿರುಗೇಟು ನೀಡಿದರು.

ಹಿಂದಿನ ಲೇಖನಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ
ಮುಂದಿನ ಲೇಖನಶಿವಮೊಗ್ಗ: ರಾಗಿಗುಡ್ಡ ಹೊರತುಪಡಿಸಿ ಇತರ ವಾರ್ಡ್ ​​ಗಳಲ್ಲಿ 144 ಸೆಕ್ಷನ್ ತೆರವು