ಬೆಂಗಳೂರು: ಸ್ಪೀಕರ್ ಸ್ಥಾನ ಬಹಳ ಜವಾಬ್ದಾರಿಯುತ ಸ್ಥಾನವಾಗಿದೆ. ಸ್ಪೀಕರ್ ಸ್ಥಾನಕ್ಕೆ ನಾನು ಅರ್ಹನಲ್ಲ ಎಂದು ಹಿರಿಯ ಶಾಸಕ ಆರ್.ವಿ ದೇಶಪಾಂಡೆ ತಿಳಿಸಿದ್ದಾರೆ.
ನಾಳೆ ಸಿಎಂ ಮತ್ತು ಡಿಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಚಿವರಾಗಿ ಕೆಲ ಶಾಸಕರು ಸಹ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಾಳಯದಲ್ಲಿ ಲಾಬಿ ಜೋರಾಗಿದ್ದು ಹಲವು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಈ ನಡುವೆ ಅವರಿಗೆ ಸ್ಪೀಕರ್ ಸ್ಥಾನ ಸಿಗುತ್ತದೆಯೇ ಎಂಬ ಕುತೂಹಲ ಮೂಡಿದೆ. ಇನ್ನು ಈ ಬಗ್ಗೆ ಸ್ವತಃ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದು, ನಾನು 8 ಸಿಎಂಗಳ ಜೊತೆ ಕೆಲಸ ಮಾಡಿದ್ದೇನೆ. ಸಚಿವ ಸ್ಥಾನದ ನಿರ್ಣಯ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.