ಮನೆ ರಾಜ್ಯ ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ: ಯು.ಟಿ.ಖಾದರ್

ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ: ಯು.ಟಿ.ಖಾದರ್

0

ಮಂಗಳೂರು: ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ಮುಸ್ಲಿಂ ಸ್ಪೀಕರ್​ ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ನೀಡಿದ್ದರೆ ಎನ್ನಲಾದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.

ಸಭಾಧ್ಯಕ್ಷ  ಸ್ಥಾನದಲ್ಲಿ ಕುಳಿತುಕೊಳ್ಳುವವರು ಅದರ ಗೌರವವನ್ನು ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಏನೂ ಹೇಳಲು ಬಯಸುವುದಿಲ್ಲ.‌ ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳ್ಳಿರಿಸಲಿಲ್ಲ. ಅರ್ಹತೆಗೆ ಅನುಗುಣವಾಗಿ ಸ್ಥಾನವನ್ನು ನೀಡಿದ್ದಾರೆ‌.ಎಲ್ಲರಿಗೆ ಗೌರವ ನೀಡಿ ಈ ಜವಾಬ್ದಾರಿಯನ್ನು  ನಿರ್ವಹಿಸುತ್ತೇನೆ ಎಂದರು.

ಸಭಾಧ್ಯಕ್ಷ ಸ್ಥಾನವನ್ನು ಪಕ್ಷವನ್ನು ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಹಿಂದಿನ ಲೇಖನಬಿಜೆಪಿಯವರು ಯಾರನ್ನಾದರೂ ವಿಪಕ್ಷನಾಯಕನಾಗಿ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ
ಮುಂದಿನ ಲೇಖನಕಾವೇರಿ ನದಿ ನೀರು ವಿವಾದ: ಕೇಂದ್ರ, ಸಿಡಬ್ಲ್ಯುಎಂಎಗೆ ನಿರ್ದೇಶನ ಕೋರಿದ್ದ ಪಿಐಎಲ್‌ ವಜಾ ಮಾಡಿದ ಹೈಕೋರ್ಟ್‌