ಮನೆ ರಾಜ್ಯ ನಾನೇ ನಿಜವಾದ ವಿರೋಧ ಪಕ್ಷದ ನಾಯಕ – ಸದನದಲ್ಲಿ ಕುರ್ಚಿ ಬದಲಾವಣೆಗೆ ಯತ್ನಾಳ್ ಕಿಡಿ

ನಾನೇ ನಿಜವಾದ ವಿರೋಧ ಪಕ್ಷದ ನಾಯಕ – ಸದನದಲ್ಲಿ ಕುರ್ಚಿ ಬದಲಾವಣೆಗೆ ಯತ್ನಾಳ್ ಕಿಡಿ

0

ಬೆಳಗಾವಿ : ಈ ಸದನದಲ್ಲಿ ನಿಜವಾದ ವಿರೋಧ ಪಕ್ಷದ ನಾಯಕ ಅಂದರೆ ನಾನೇ ಅಂತಾ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗರಂ ಆದರು. ವಿಧಾನಸಭೆಯಲ್ಲಿ ಕುರ್ಚಿ ಬದಲಾಯಿಸಿದ್ದಕ್ಕೆ ಗರಂ ಆದ ಬಿಜೆಪಿ ಉಚ್ಚಾಟಿತ ಶಾಸಕ ಯತ್ನಾಳ್, ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ.

ಇದು ಯಾವ ನ್ಯಾಯ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಶಾಸಕ ರಂಗನಾಥ್ ಮಾತನಾಡಿ, ಯತ್ನಾಳ್‌ರನ್ನ ಬಿಜೆಪಿಯವರು ಅನಾಥರನ್ನಾಗಿ ಮಾಡಿದ್ದಾರೆ. ಅವರ ಜೊತೆ ನಾವು ನಿಲ್ಲುತ್ತೇವೆ ಎಂದ ಕಾಲೆಳೆದರು.

ಆಗ ಸ್ಪೀಕರ್ ಯ.ಟಿ.ಖಾದರ್ ಸ್ಪಷ್ಟನೆ ನೀಡಿ, ರಾಜಕೀಯದಲ್ಲಿ ಸೀನಿಯರ್, ಜೂನಿಯರ್ ಅಂತಿಲ್ಲ. ಅಧಿಕಾರಿದಲ್ಲಿದ್ದಾಗ ಸೀನಿಯರ್, ಇಲ್ಲದಿದ್ದಾಗ ಜೂನಿಯರ್, ಶಾಸಕರ ಸಂಖ್ಯಾಬಲ ನೋಡಿಕೊಂಡು ಸೀಟು ಕೊಡೋದು. ನಿಮಗೆ ಬೇಕಾದಾಗ ಇಲ್ಲಿ ಇರುತ್ತೀರಾ, ಬೇಡ ಅಂದಾಗ ಅಲ್ಲಿಗೆ ಹೋಗ್ತೀರಿ ಎಂದು ತಿವಿದರು.

ಬಳಿಕ ಮಾತನಾಡಿದ ಯತ್ನಾಳ್, ಬೇಕಾದಾಗ ಅಂತಾ ಅಲ್ಲ, ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಈ ಸದನದಲ್ಲಿ ನಿಜವಾದ ವಿರೋಧ ಪಕ್ಷದ ನಾಯಕ ಅಂದರೆ ನಾನೇ. ನಾನು ಅಡ್ಜಸ್ಮೆಂಟ್ ರಾಜಕಾರಣಿ ಅಲ್ಲ. ನಾನೇನು ಸಿಎಂ ಮನೆಗೆ ಹೋಗಿಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಎದುರಲ್ಲೇ ನಾನೇ ನಿಜವಾದ ವಿರೋಧ ಪಕ್ಷದ ನಾಯಕ ಎಂದು ಟಾಂಗ್ ಕೊಟ್ಟರು.