ಮನೆ ರಾಜಕೀಯ ನಾನೇ ಚಾಮುಂಡೇಶ್ವರಿಗೆ ಬರುತ್ತೇನೆ: ಹೆಚ್‍ ಡಿಕೆ

ನಾನೇ ಚಾಮುಂಡೇಶ್ವರಿಗೆ ಬರುತ್ತೇನೆ: ಹೆಚ್‍ ಡಿಕೆ

0

ಮೈಸೂರುಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನಾನೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅವರ ಬದಲಿಗೆ ಪಕ್ಷದ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದಾಗ, ನಾನೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಬೇಡ ಎಂದಿದ್ದೇನೆ. ನಾನು, ಅವರು ಚರ್ಚೆ ಮಾಡಿದ್ದೇವೆ. ಕುಟುಂಬ ರಾಜಕಾರಣದ ಹೆಸರಿನಲ್ಲಿ ನಮ್ಮ ಮೇಲೆ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರದಿಂದ ದೂರವಾಗಲು ಇಂತಹ ಚರ್ಚೆಯನ್ನು ನಾನು ಅನಿತಾ ಕುಮಾರಸ್ವಾಮಿ ಮಾಡಿದ್ದೇವೆ. ಈ ಬಗ್ಗೆ ಅಂತಿಮ ತೀರ್ಮಾನ ಚುನಾವಣೆ ಘೋಷಣೆ ನಂತರ ಮಾಡುತ್ತೇವೆ ಎಂದರು.

ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯನ್ನು ರಾಜಕೀಯ ಕ್ಷೇತ್ರಕ್ಕೆ ತರುವುದು ನನಗೆ ಇಷ್ಟವಿರಲಿಲ್ಲ. ಮುಖಂಡರ ಒತ್ತಡದ ಮೇರೆಗೆ ಅವರನ್ನ ರಾಜಕಾರಣಕ್ಕೆ ತಂದೆ.  ಚುನಾವಣೆಯ ಸಂದರ್ಭದಲ್ಲಿ ಅಂದಿನ ಪರಿಸ್ಥಿತಿ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಹಿಂದಿನ ಲೇಖನಹಿಜಾಬ್ ವಿವಾದ: ಹೈಕೋರ್ಟ್ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ
ಮುಂದಿನ ಲೇಖನಕೊರೊನಾ: 58,077 ಹೊಸ ಪ್ರಕರಣ ಪತ್ತೆ