ಮನೆ ರಾಜಕೀಯ ನನಗೆ ಯಾರ ಬೆಂಬಲವೂ ಬೇಡ: ಡಿ.ಕೆ ಶಿವಕುಮಾರ್‌

ನನಗೆ ಯಾರ ಬೆಂಬಲವೂ ಬೇಡ: ಡಿ.ಕೆ ಶಿವಕುಮಾರ್‌

0

ಚಿಕ್ಕಮಗಳೂರು: ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾರೂ ಕೂಗುವುದು ಬೇಡ. ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗುವುದು ಬೇಡ ಇದು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದ ಕಾರ್ಯಕರ್ತರ ಎದುರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು.

Join Our Whatsapp Group

ಮುಖ್ಯಮಂತ್ರಿ ಬದಲಾವಣೆ ಮಾತು, ನಾಯಕರ ಡಿನ್ನರ್‌ ಮೀಟಿಂಗ್‌ ನ ನಡುವೆ ಶೃಂಗೇರಿಯಲ್ಲಿ ಡಿಕೆ ಶಿವಕುಮಾರ್‌ ಅವರ ಈ ಮಾತು ಮಹತ್ವ ಪಡೆದಿದೆ.

ಶೃಂಗೇರಿಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಟೆಂಪಲ್‌ ರನ್‌ ಪ್ರಶ್ನೆಗೆ ಉತ್ತರಿಸಿದರು.

“ನಾನು ದಿನಾ ಪೂಜೆ ಮಾಡುತ್ತೇನೆ, ನಾನು ಧರ್ಮದ ಮೇಲೆ ನಂಬಿಕೆ ಇಟ್ಟವನು. ಸಮಾಜ, ಜನ, ರಾಜ್ಯ, ಪಕ್ಷ, ಕುಟುಂಬಕ್ಕಾಗಿ ಪೂಜೆ ಮಾಡುತ್ತೇನೆ. ಟೆಂಪಲ್ ರನ್, ಹಾಗಾದರೆ ದೇವಸ್ಥಾನ ಯಾಕೆ, ಬೀಗ ಹಾಕ್ಬಿಡಿ. ದೇವನೊಬ್ಬ ನಾಮ ಹಲವು ಎನ್ನುವ ತತ್ವದ ಮೇಲೆ‌ ನಂಬಿಕೆ ಇಟ್ಟವನು ನಾನು. ಅವರವರ ನಂಬಿಕೆ ಅವರವರ ಆಚಾರ-ವಿಚಾರ ಅವರಿಗೆ ಬಿಟ್ಟದ್ದು ಎಂದರು.

ರಾಜಕಾರಣದಲ್ಲಿ ಯಾವ ತಿರುವು ಅವಶ್ಯಕತೆ ಇಲ್ಲ. ತಿರುವಿನ ಬಗ್ಗೆ ಎಲ್ಲರ ಮಾತು ಗೌಣ. ಪಕ್ಷ, ಹೈಕಮಾಂಡ್ ಹೇಳಿದ್ದೇ ಅಂತಿಮ. ನನಗೆ ಯಾರ ಒತ್ತಾಯ, ಬೆಂಬಲ ಏನೂ ಬೇಡ. ನನಗಾಗಿ ಕಾರ್ಯಕರ್ತರು, ಶಾಸಕರು, ಬೆಂಬಲಿಗರು, ಕೂಗುವುದು ಬೇಡ. ಮಾಡುವ ಕೆಲಸ ಮಾಡೋಣ, ಫಲಾಫಲ ದೇವರಿಗೆ ಬಿಡೋಣ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.