ಮನೆ ರಾಜಕೀಯ ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ  ಪೂರ್ಣ ಬೆಂಬಲ ಇದೆ: ಹೆಚ್ ಡಿಕೆ

ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ  ಪೂರ್ಣ ಬೆಂಬಲ ಇದೆ: ಹೆಚ್ ಡಿಕೆ

0

ಬೆಂಗಳೂರು(Bengaluru): ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amith Shah) ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H.D.Kumaraswamy) ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ  ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ  ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಹೇಳಿದ್ದಾರೆ.

ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ. ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ?  ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ  ಪೂರ್ಣ ಬೆಂಬಲ ಇದೆ ಎಂದು ಟ್ವೀಟ್ ಮಾಡಿದ್ದಾರೆ.

ಹಿಂದಿನ ಲೇಖನಎಲ್ಲರೂ ತಪ್ಪದೇ ಮುನ್ನೆಚ್ಚರಿಕೆ ಲಸಿಕೆ ಪಡೆಯಿರಿ: ಸಚಿವ ಡಾ.ಕೆ.ಸುಧಾಕರ್
ಮುಂದಿನ ಲೇಖನಕೆನಡಾದಲ್ಲಿ ಭಾರತ ಮೂಲದ ವಿದ್ಯಾರ್ಥಿಗೆ ಗುಂಡಿಟ್ಟು ಹತ್ಯೆ