ಮನೆ ರಾಜ್ಯ ನನ್ನ ಬರಹವನ್ನು ಪಠ್ಯಪುಸ್ತಕಕ್ಕೆ ಆಯ್ಕೆ ಮಾಡಿಕೊಳ್ಳಲು ಸಮ್ಮತಿಯಿಲ್ಲ: ಜಿ. ರಾಮಕೃಷ್ಣ

ನನ್ನ ಬರಹವನ್ನು ಪಠ್ಯಪುಸ್ತಕಕ್ಕೆ ಆಯ್ಕೆ ಮಾಡಿಕೊಳ್ಳಲು ಸಮ್ಮತಿಯಿಲ್ಲ: ಜಿ. ರಾಮಕೃಷ್ಣ

0

ಬೆಂಗಳೂರು(Bengaluru): ನನ್ನ ಬರಹವನ್ನು ಪಠ್ಯಪುಸ್ತಕದ ಪರಿಧಿಯಿಂದ ಹೊರಗಿಡುವುದು ಸೂಕ್ತವೆಂದು ಭಾವಿಸಿದ್ದೇನೆ. ನನ್ನ ಯಾವುದಾದರೂ ಬರಹವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲ’ ಎಂದು ಸಾಹಿತಿ ಜಿ. ರಾಮಕೃಷ್ಣ ತಿಳಿಸಿದ್ದಾರೆ.

‘ಶಿಕ್ಷಣವನ್ನು ಕೆಟ್ಟ ರಾಜಕೀಯಕ್ಕೆ ಗುರಿ ಮಾಡಲಾಗುತ್ತಿರುವುದು ಸರ್ವಥಾ ಕ್ಷಮಾರ್ಹವಲ್ಲ. ನಮ್ಮ ರಾಜ್ಯದ ಶಾಲೆಗಳ ಪಠ್ಯಪುಸ್ತಕಗಳ ತಥಾಕಥಿತ ಪರಿಷ್ಕರಣೆಯು ತೀರಾ ಅಪಮಾರ್ಗದಲ್ಲಿ ಸಾಗುತ್ತಿರುವುದು ಜಗಜ್ಜಾಹೀರಾಗಿದೆ. ಅದು ಕೇವಲ ಅಬದ್ಧ ಮತ್ತು ಅವೈಚಾರಿಕ ಪ್ರಕ್ರಿಯೆಯಾಗಿ ಉಳಿದಿಲ್ಲ. ಮಕ್ಕಳಿಗೆ ವಿಷ ಉಣಿಸುವುದು ಬೌದ್ಧಿಕ ಕ್ಷೇತ್ರದಲ್ಲಿ ದುರಂತ ಎಂದು ಹೇಳಿದ್ದಾರೆ.

ಹಿಂದಿನ ಲೇಖನಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ: ಜೆ.ಪಿ. ಗೋಪಾಲಕೃಷ್ಣ ಪಣಿಕರ್ ಮಾಹಿತಿ
ಮುಂದಿನ ಲೇಖನಟೆಕ್ಸಾಸ್​ ಶಾಲೆಯಲ್ಲಿ ಶೂಟೌಟ್: 18 ಮಕ್ಕಳು ಸೇರಿ 21 ಮಂದಿಯ ಹತ್ಯೆ