ಮನೆ ರಾಜ್ಯ “ಐ ಲವ್ ಮಹಮ್ಮದ್” ಬ್ಯಾನರ್ ಗಲಾಟೆಯಾಗಿದ್ದ, ಜಾಗದಲ್ಲೇ ರಾಮನ ಫ್ಲೆಕ್ಸ್ ಹರಿದು ವಿಕೃತಿ

“ಐ ಲವ್ ಮಹಮ್ಮದ್” ಬ್ಯಾನರ್ ಗಲಾಟೆಯಾಗಿದ್ದ, ಜಾಗದಲ್ಲೇ ರಾಮನ ಫ್ಲೆಕ್ಸ್ ಹರಿದು ವಿಕೃತಿ

0

ದಾವಣಗೆರೆ : ನಗರದ ಬೇತೂರು ರಸ್ತೆಯ ವೆಂಕಟೇಶ್ವರ ಸರ್ಕಲ್‍ನಲ್ಲಿ ಅಳವಡಿಸಿದ್ದ ರಾಮ, ಆಂಜನೇಯ ಹಾಗೂ ದುರ್ಗಾ ದೇವಿಯ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

ಸಾರ್ವಜನಿಕ ದಸರಾ ಮಹೋತ್ಸವದ ಶೋಭಾಯಾತ್ರೆ ಹಿನ್ನಲೆ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಈ ಫ್ಲೆಕ್ಸ್‌ಳಿಗೆ ಬ್ಲೇಡ್‍ನಿಂದ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮರೆದಿದ್ದಾರೆ. ಈ ಹಿಂದೆ ಇದೇ ಜಾಗದಲ್ಲಿ `ಐ ಲವ್ ಮಹಮ್ಮದ್’ ಬ್ಯಾನರ್ ವಿಚಾರಕ್ಕೆ ಗಲಾಟೆಯಾಗಿತ್ತು.

ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಸಂಬಂಧ ಅಜಾದ್ ನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಕಿಡಿಗೇಡಿಗಳನ್ನು ಬಂಧಿಸಲು ಆ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.