ಮನೆ ರಾಜ್ಯ 2028ಕ್ಕೆ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ: ಸತೀಶ್ ಜಾರಕಿಹೊಳಿ

2028ಕ್ಕೆ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ: ಸತೀಶ್ ಜಾರಕಿಹೊಳಿ

0

ಬೆಂಗಳೂರು: 2028ಕ್ಕೆ ಕಾಂಗ್ರೆಸ್​ ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಬೇರೆಯವರು ಕೇಳೋದು ಅವರವರ ಇಷ್ಟ. ನಾನು 2028ರಲ್ಲಿ ಸಿಎಂ ಸ್ಥಾನಕ್ಕೆ ಬೇಡಿಕೆ ಇಡುತ್ತೇನೆ ಎಂದು ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಅಂತ ಹೇಳಿದ್ದಾರೆ. ಬೇರೆಯವರು ಹೇಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ಉದ್ಭವಿಸಿಲ್ಲ. ಪಕ್ಷದ ತೀರ್ಮಾನವೇ ನನ್ನ ತೀರ್ಮಾನ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ರಾಜಕೀಯ ಭಾಷಣ ಮಾಡುತ್ತಾರೆ. ನಮ್ಮ ಪಕ್ಷದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಭಾರತೀಯ ಜನತಾ ಪಕ್ಷದಲ್ಲಿ ವಾಕ್​ ಸ್ವಾತಂತ್ರ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಒಂದು ರಾಜ್ಯದಲ್ಲಿ ಇನ್ನೊಂದು ರಾಜ್ಯದ ಬಗ್ಗೆ ಟೀಕಿಸುವುದು ಸಹಜ. ಪ್ರಧಾನಿ ಮೋದಿ ಆರೋಪ ಮಾಡಿದ್ದನ್ನು ಒಪ್ಪಬೇಕು ಅಂತಿಲ್ಲ. ನಾವು ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೆವು. ನಾವು ಬಿಜೆಪಿ ವಿರುದ್ಧ ಆರೋಪ ಮಾಡಿದಾಗ ಒಪ್ಪಿಕೊಂಡಿದ್ರಾ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಬ್ರೇಕ್​ ಫಾಸ್ಟ್​ ಮೀಟಿಂಗ್ ​ಗೆ ಗೈರು ವಿಚಾರವಾಗಿ ಮಾತನಾಡಿದ ಅವರು, ಅನಾರೋಗ್ಯದ ಕಾರಣ ಸಭೆಗೆ ಹೋಗಲು ಆಗಲಿಲ್ಲ. ಸಭೆಗೆ ಗೈರಾಗುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೂ ತಂದಿದ್ದೆ. ಮೀಟಿಂಗ್​ಗೆ ಹೋಗದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಯಾರೂ ಬಹಿರಂಗ ಹೇಳಿಕೆ ನೀಡಬಾರದು ಅನ್ನೋದು ಸರಿ ಇದೆ ಎಂದು ಹೇಳಿದ್ದಾರೆ.

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನಕ್ರಿಶ್ಚಿಯನ್‌ ಧರ್ಮಕ್ಕೆ ಪತ್ನಿ ಮತಾಂತರದಿಂದ ಮದುವೆ ಅನೂರ್ಜಿತ; ಹಕ್ಕುಗಳು ರದ್ದು: ಹೈಕೋರ್ಟ್‌