ಮನೆ ಸುದ್ದಿ ಜಾಲ ನನ್ನ ಹುಟ್ಟುಹಬ್ಬ ಆಚರಣೆ ಮಾಡಲ್ಲ: ಬಸವರಾಜ ಬೊಮ್ಮಾಯಿ

ನನ್ನ ಹುಟ್ಟುಹಬ್ಬ ಆಚರಣೆ ಮಾಡಲ್ಲ: ಬಸವರಾಜ ಬೊಮ್ಮಾಯಿ

0

ಬೆಂಗಳೂರು:  ಜನವರಿ 28ರ ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಹುಟ್ಟಿದ ದಿನವಾಗಿದ್ದು, ನಾನು ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ನಾನು ಹುಟ್ಟುಹಬ್ಬ ಆಚರಣೆ ಮಾಡಲ್ಲ, ಯಾವತ್ತೂ ಮಾಡಿಲ್ಲ ಎಂದರು.

ಅಲ್ಲದೇ ಜನವರಿ 28ಕ್ಕೆ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಆರು ತಿಂಗಳು ಆಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆರು ತಿಂಗಳ ಸಾಧನೆಗಳ ಬಗ್ಗೆ ಪುಸ್ತಕ ಬಿಡುಗಡೆ ಮಾಡಲಾಗುವುದು. ಜನ ಉಪಯೋಗಿ ಆಗಿದ್ದೇವೆ ಎಂಬ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮದ ಪಕ್ಷಿನೋಟ ಈ ಪುಸ್ತಕದಲ್ಲಿ ಇರಲಿದೆ. ನಮ್ಮ ಸರ್ಕಾರ ಸ್ಪಂದನಾ ಶೀಲವಾಗಿದೆ. ಸಮಸ್ಯೆಗಳಿಗೆ ಸ್ಪಂದನೆ ಮಾಡಿಕೊಂಡು ಬಂದಿದ್ದೇವೆ. ಅದಕ್ಕೆ ಯಾವುದೇ ಸಂದರ್ಭ ಬೇಕಾಗಿಲ್ಲ ಎಂದರು.

ಜೋಳ ಖರೀದಿ ಬಗ್ಗೆ ಎಲ್ಲ ರೈತರಿಗೆ ಅವಕಾಶ ನೀಡಲಾಗಿದೆ. ಇದೀಗ ರಾಗಿ ಖರೀದಿ ಬಗ್ಗೆ ಎಲ್ಲ ರೈತರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರೈತರಿಗೆ ಅನುಕೂಲ ಮಾಡಲು ಕ್ರಮ ಕೈಗೊಳ್ಳಲಾಗುವುದು. ನಿರಂತರವಾಗಿ ಜನರಿಗೆ ಸಹಾಯಕ ಮಾಡುವ ಧ್ಯೇಯ ಹೊಂದಿದ್ದೇವೆ ಎಂದರು.

ಹಿಂದಿನ ಲೇಖನತೆರಿಗೆ ಸಂಗ್ರಹ ಗುರಿ ಮುಟ್ಟಲು ಸಹಕರಿಸಿ: ಬಿಬಿಎಂಪಿ ಆಯುಕ್ತರ ಸೂಚನೆ
ಮುಂದಿನ ಲೇಖನರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಬಿ.ಕೆ.ಹರಿಪ್ರಸಾದ್ ನೇಮಕ