ಮನೆ ರಾಜ್ಯ ನನಗೆ ಯಾರದ್ದೇ ಒತ್ತಡ ಬಂದ್ರೂ ಮಂಡ್ಯದಿಂದ ಸ್ಪರ್ಧೆ ಮಾಡೊಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ನನಗೆ ಯಾರದ್ದೇ ಒತ್ತಡ ಬಂದ್ರೂ ಮಂಡ್ಯದಿಂದ ಸ್ಪರ್ಧೆ ಮಾಡೊಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

0

ಪಾಂಡವಪುರ:ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನನಗೆ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಪರ್ಧೆ ಮಾಡಲು ಜೆಡಿಸ್‌ ಕಾರ್ಯರ್ಕರು ಹಾಗೂ ಮುಖಂಡರ ಒತ್ತೆ ಕೇಳಿಬರುತ್ತಿದೆ. ಆದರೆ, ಎಲ್ಲ ಸಮಯದಲ್ಲೂ ನಾನು ಒಂದೇ ಮಾತು ಹೇಳುತ್ತೇನೆ.ನಾನು ಮಂಡ್ಯ ಲೋಸಕಭಾ ಕ್ಷೇತ್ರದ ಆಕಾಂಕ್ಷಿಯೂ ಅಲ್ಲ, ಯಾರದ್ದೇ ಒತ್ತಡ ಬಂದರೂ ಸ್ಪರ್ಧೆಯನ್ನೂ ಮಾಡುವುದಿಲ್ಲ ಎಂದು ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಪಾಂಡವಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ನನ್ನ ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರ ಸ್ಪರ್ಧೆಗೆ ಕಾರ್ಯಕರ್ತರ, ಮುಖಂಡರ ಒತ್ತಡ ಇದೆ. ನನ್ನ ಮಾತು ಎಲ್ಲಾ ಸಮಯದಲ್ಲೂ ಒಂದೇ ಆಗಿರುತ್ತದೆ. ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ. ಯಾವುದೇ ಒತ್ತಡ ಬಂದರೂ ನಾನು ನಿಲ್ಲಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದರೂ ಸೀಟು ಹಂಚಿಕೆ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ. ಎನ್‌ಡಿಎ ಮೈತ್ರಿಕೂಟದಲ್ಲಿ ಯಾವ ರೀತಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ಆಗಿದೆ. ನನ್ನ ಪ್ರವಾಸ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ಕೋಲಾರ, ಹಾಸನ, ಮೈಸೂರು ಸೇರಿದಂತೆ ಎಲ್ಲಾ ಕಡೆ ಪ್ರವಾಸ ಮಾಡಬೇಕಿದೆ. ನಾನು ಮಂಡ್ಯ ಅಭ್ಯರ್ಥಿ ಆಗಿದ್ದ ಕಾರಣ ಮಂಡ್ಯದಲ್ಲಿ ಹೆಚ್ಚೆಚ್ಚು ಓಡಾಡಲು ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಕ್ಷೇತ್ರಗಳಿಗೂ ಭೇಟಿ ನೀಡುತ್ತೇನೆ ಎಂದು ಹೇಳಿದರು.
ಜೆಡಿಎಸ್ ಮೈತ್ರಿಗೆ ಬಿಜೆಪಿ ನಾಯಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ಅಮಿತ್ ಶಾ ಅವರ ಸಭೆಯಲ್ಲಿ ಬಿಜೆಪಿಯ ನಾಯಕರಿಗೆ ಸಂದೇಶ ಹೋಗಿದೆ. ನಮ್ಮ ಕಡೆಯಿಂದ ಯಾವುದೇ ಅಸಮಾಧಾನ ಇಲ್ಲ. ನಾವು ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಮೂರನೇ ಬಾರಿ ಮೋದಿ ಪ್ರಧಾನಿ ಆಗಬೇಕೆಂದು ನಮ್ಮ ಆಶಯವಾಗಿದೆ. ನಾವು ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಡಲ್ಲ ಎಂದು ಸ್ಪಷ್ಟನೆಯನ್ನು ನಿಡಿದರು.
ನಾನು ಯೂಟರ್ನ್ ಹೊಡೆಯುವ ಗಿರಾಕಿ ಅಲ್ಲ, ನನ್ನ ಉದ್ದೇಶದ ಬಗ್ಗೆ ನನ್ನ ಆಲೋಚನೆಗಳಲ್ಲಿ ಸ್ಪಷ್ಟತೆಯಿದೆ. ಒಂದು ವರ್ಷದ ಹಿಂದೆ ಕೇಳಿದ್ದಾಗಲೂ ನಾನು ಇದೇ ಮಾತನ್ನು ಹೇಳಿದ್ದೆ, ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾನು ಟಿಕೆಟ್ ಆಕಾಂಕ್ಷಿಯಲ್ಲ. ಕಳೆದ ಕೆಲ ದಿನಗಳಿಂದ ಮಂಡ್ಯ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ನಾನು ನಿಲ್ಲುತ್ತಿದ್ದೇನೆ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದು ನಿಜವಲ್ಲ, ಕಳೆದ 25 ದಿನಗಳಿಂದ ಹಳೆ ಮೈಸೂರು ಭಾಗದ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟ ಎಲ್ಲಾ ತಾಲ್ಲೂಕುಗಳ ಮುಖಂಡರು, ಅಭ್ಯರ್ಥಿಗಳ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ವರಿಷ್ಠರ ಗಮನಕ್ಕೆ ತರುವ ಜವಾಬ್ದಾರಿಯನ್ನು ಪಕ್ಷ ನನಗೆ ಕೊಟ್ಟಿದೆ. ಮಂಡ್ಯ ಜಿಲ್ಲೆಯ ಹಲವು ತಾಲ್ಲೂಕುಗಳಿಗೆ ಹೋಗಿ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದೇನೆ ಎಂದು ಹೇಳಿದ್ದರು.