ಮನೆ ರಾಜ್ಯ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ – ಯತೀಂದ್ರಗೆ ಡಿಕೆಶಿ ತಿರುಗೇಟು

ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ – ಯತೀಂದ್ರಗೆ ಡಿಕೆಶಿ ತಿರುಗೇಟು

0

ಬೆಂಗಳೂರು : ಯಾರ ಹತ್ತಿರ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕೆಲ ಶಾಸಕರು ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಉತ್ತರಿಸಿದರು.

ನಾನು ಶಿಸ್ತಿನ ಜೊತೆ ನಿಲ್ಲುತ್ತೇನೆ. ಶಿಸ್ತು ನನ್ನ ಪಕ್ಷದ ಆದ್ಯತೆ ಎಂದು ಹೇಳುವ ಪರೋಕ್ಷವಾಗಿ ಯತೀಂದ್ರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ ಶಾಸಕರ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ ಡಿಕೆ ಶಿವಕುಮಾರ್‌ ಜಾಣ ನಡೆ ತೋರಿಸುತ್ತಿದ್ದಾರೆ. ಒಂದು ವೇಳೆ ಯತೀಂದ್ರ ಹೇಳಿಕೆಗೆ ಖಡಕ್‌ ಆಗಿ ಪ್ರತಿಕ್ರಿಯಿಸಿದರೆ ಮತ್ತೆ ಅದು ದೊಡ್ಡ ಮಟ್ಟದ ಸುದ್ದಿಯಾಗಲಿದೆ ಎನ್ನುವುದನ್ನು ಅರಿತಿರುವ ಡಿಕೆಶಿ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದಷ್ಟೇ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಎಂಬ ಯತೀಂದ್ರ ಭಾಷಣದ ವಿಡಿಯೋಗೆ ಸಂಬಂಧಿಸಿದಂತೆ ಹೈಕಮಾಂಡ್‌ಗೆ ಕೆಪಿಸಿಸಿಯಿಂದ ವರದಿ ಸಲ್ಲಿಕೆಯಾಗಿದೆ. ಯತೀಂದ್ರ ಸಿದ್ದರಾಮಯ್ಯ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಉಳಿದ ನಾಯಕರಂತೆ ಯತೀಂದ್ರ ಹೇಳಿಕೆಗಳಿಗೂ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಬಗ್ಗೆ ಹೈ ಕಮಾಂಡ್ ಗೆ ವಿಸ್ತೃತ ವರದಿ ರವಾನೆಯಾಗಿದೆ.