ಬೆಂಗಳೂರು: ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.
ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಸೋಮಣ್ಣ ಪ್ರತಿಕ್ರಿಯಿಸಿದ್ದು, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ ಎಂದು ಪರೋಕ್ಷವಾಗಿ ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.














