ಮನೆ ರಾಷ್ಟ್ರೀಯ ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ – ಪೈಲಟ್ ಸೇಫ್..!

ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ – ಪೈಲಟ್ ಸೇಫ್..!

0

ಲಕ್ನೋ : ಪ್ರಯಾಗ್‌ರಾಜ್‌ನಲ್ಲಿ ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್‌ನ್ನು ರಕ್ಷಣೆ ಮಾಡಲಾಗಿದೆ. ಇಂದು (ಜ.21) ಮಧ್ಯಾಹ್ನ ಈ ಅವಘಡ ಸಂಭವಿಸಿದೆ.

ಪ್ರಯಾಗ್‌ರಾಜ್‌ನ ಸಂಗಮದಿಂದ 2 ಕಿ.ಮೀ ದೂರದಲ್ಲಿರುವ ಕೆರೆಯಲ್ಲಿ ಮೈಕ್ರೋಲೈಟ್ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈಗಾಗಲೇ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ಇಬ್ಬರು ಪೈಲಟ್‌ನ್ನು ರಕ್ಷಿಸಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.