ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಶಾಸಕರಾದ ಟಿ.ಬಿ.ಜಯಚಂದ್ರ, ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರ ನಡುವೆ ಪೈಪೋಟಿ ನಡೆದಿತ್ತು.
ಆದರೆ ರಾಜ್ಯ ಸರ್ಕಾರ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.














