Saval TV on YouTube
ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಶಂಕಿತ ನಕ್ಸಲರು ನಡೆಸಿದ ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್’ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡ ಎಎಸ್’ಐ ಮುಹಮ್ಮದ್ ಅಸ್ಲಾಮ್ ಗಾಯಗೊಂಡಿದ್ದಾರೆ.
ತಾರ್ರೆಮ್ ಪೊಲೀಸ್ ಠಾಣಾ ವ್ಯಾಪ್ತಿಯ ಪೆಡಾಪಲ್ಲಿ ಗ್ರಾಮದಲ್ಲಿ ಬೆಳಿಗ್ಗೆ 8.45ರ ಸುಮಾರಿಗೆ ಘಟನೆ ನಡೆದಿದೆ. ಸಿಆರ್’ಪಿಎಫ್’ನ 153ನೇ ಬೆಟಾಲಿಯನ್ ತಂಡವು ಗಸ್ತು ತಿರುಗುತ್ತಿದ್ದಾಗ ಐಇಡಿ ಸ್ಫೋಟಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಸಾಗುಡಾದಲ್ಲಿರುವ ಸಿಆರ್’ಪಿಎಫ್’ನ ಆಸ್ಪತ್ರೆಯಲ್ಲಿ ಗಾಯಗೊಂಡ ಮುಹಮ್ಮದ್ ಅಸ್ಲಾಮ್ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ರಾಯಪುರಕ್ಕೆ ಏರ್’ಲಿಫ್ಟ್ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.