ಮನೆ ರಾಷ್ಟ್ರೀಯ ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಜಾರಿ: ರಾಹುಲ್ ಗಾಂಧಿ

ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಜಾರಿ: ರಾಹುಲ್ ಗಾಂಧಿ

0

ನವದೆಹಲಿ(Newdelhi): ಗುಜರಾತ್‌ನಲ್ಲಿ ಅಧಿಕಾರಕ್ಕೆ ಕಾಂಗ್ರೆಸ್‌ ಅನ್ನು ಆಯ್ಕೆ ಮಾಡಿದರೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಘೋಷಿಸಿದ್ದಾರೆ.

ಈ ಕುರಿತು #CongressDegiOldPension ಟ್ವೀಟ್ ಮಾಡಿರುವ ಅವರು, ಗುಜರಾತ್‌ನಲ್ಲಿ ಪಿಂಚಣಿ ಯೋಜನೆಯನ್ನು ಬಿಜೆಪಿ ಕೈಬಿಡುವ ಮೂಲಕ ಸ್ವಾವಲಂಬಿ ಹಿರಿಯ ನಾಗರಿಕರನ್ನು ಅವಲಂಬಿತರನ್ನಾಗಿಸಿದೆ ಎಂದು ಅರೋಪಿಸಿದ್ದಾರೆ.

ರಾಷ್ಟ್ರವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ದುಡಿದ ಸರ್ಕಾರಿ ನೌಕರರು ಪಿಂಚಣಿ ಪಡೆಯುವುದು ಹಕ್ಕಾಗಿದೆ. ರಾಜಸ್ಥಾನ ಮತ್ತು ಛತ್ತೀಸಢಡದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೆ ತಂದಿದ್ದೇವೆ. ಈಗ ಗುಜರಾತ್‌ನಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿದರೆ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ನ ಹಿರಿಯ ಮುಖಂಡ ಅರ್ಜುನ್‌ ಮೊಧವಾಡಿಯಾ ಅವರು ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇತ್ತೀಚೆಗೆ ಸಾವಿರಾರು ನಿವೃತ್ತ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.