ಮನೆ ರಾಜಕೀಯ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಎಟಿಎಂ ಆಗಲಿದೆ: ಬಿ.ವೈ ವಿಜಯೇಂದ್ರ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಎಟಿಎಂ ಆಗಲಿದೆ: ಬಿ.ವೈ ವಿಜಯೇಂದ್ರ

0

ಮೈಸೂರು: ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೈಕಮಾಂಡ್ ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ. ಇದಕ್ಕೆ ರಾಜ್ಯದ ಜನ ಅವಕಾಶ ನೀಡುವುದಿಲ್ಲ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Join Our Whatsapp Group

ಸೋಮಣ್ಣ ಪರ ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು,  ಜೆಡಿಎಸ್ ಪಕ್ಷ ಅತಂತ್ರ ಪರಿಸ್ಥಿತಿ ಕನಸು ಕಾಣುತ್ತಿದ್ದಾರೆ. ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತಾರೆ. ಎಲ್ಲಾ ಕ್ಷೇತ್ರದವರಿಗೆ ಬಿಜೆಪಿ ಅವಕಾಶ ಕೊಟ್ಟಿದೆ. ಈ ಮೂಲಕ ಮೋದಿ ಕನಸು. ಭವಿಷ್ಯದಲ್ಲಿ ಹೈ ಟ್ರಿಲಿಯನ್ ಎಕಾನಮಿ ತರುವುದು. ಅದಕ್ಕೆ ರಾಜ್ಯದ ಕೊಡುಗೆ ಬಹಳ ಮುಖ್ಯವಾಗಿದ್ದು, ಜಿಎಸ್ಟಿಯಲ್ಲಿ ನಮ್ಮ ರಾಜ್ಯ ನಂಬರ್ 2ನೇ ಸ್ಥಾನದಲ್ಲಿದೆ ಎಂದರು.

ಬಿಜೆಪಿ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಹೊಸ ಪ್ರಯೋಗ ಕರ್ನಾಟಕ ಮಾತ್ರವಲ್ಲ, ಯುಪಿ ಗುಜರಾತ್ ಸೇರಿ ಎಲ್ಲಾ ಕಡೆ ಆಗಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ರಾಜ್ಯದಲ್ಲೂ ಈ ಪ್ರಯೋಗ ಮಾಡಿದ್ದು, ಇದನ್ನು ರಾಜ್ಯದ ಜನರು ಸಹ ಗಮನಿಸಿದ್ದಾರೆ. ಇದು ಕಾರ್ಯಕರ್ತರೇ ಕಟ್ಟಿರುವ ಪಕ್ಷ. ರಾಜ್ಯಾದ್ಯಂತ ಕಾರ್ಯಕರ್ತರ ಅಭಿಪ್ರಾಯ ಪಡೆದು ಅದಕ್ಕೆ ಮನ್ನಣೆ ನೀಡಲಾಗಿದೆ. ಪ್ರಧಾನಿ ಮೋದಿ, ನಡ್ಡಾ, ಅಮಿತ್ ಶಾ ಸ್ಪಷ್ಟವಾದ ಭವಿಷ್ಯ ರೂಪಿಸುವ ಸಲುವಾಗಿ ಹೊಸ ಮುಖಗಳಿಗೆ ಅವಕಾಶ ನೀಡುತ್ತಿದ್ದಾರೆ ಎಂದು ಹೇಳಿದರು.

ಯಡಿಯೂರಪ್ಪ, ಕಾಮನ್ ಮ್ಯಾನ್ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಡಿದ ಅಭಿವೃದ್ಧಿ ಕೆಲಸ ಬಿಜೆಪಿಗೆ ಸ್ಪಷ್ಟ ಬಹುಮತ ತಂದು ಕೊಡುತ್ತದೆ. ಬಿಜೆಪಿ ಒಬ್ಬರು ಇಬ್ಬರ ಮೇಲೆ ಡಿಫೆಂಡ್ ಆಗಿರುವ ಪಕ್ಷ ಅಲ್ಲ. ಕಾರ್ಯಕರ್ತರಿಂದ ಕಾರ್ಯಕರ್ತರಿಗಾಗಿ ಇರುವ ಪಕ್ಷ. ರಿಸ್ಕ್ ತೆಗೆದುಕೊಳ್ಳುವುದರಲ್ಲಿ ಬಿಜೆಪಿ ಹೈಕಮಾಂಡ್ ನಿಸ್ಸೀಮರು. ಪಕ್ಷದ ಹಿತದೃಷ್ಟಿಯಿಂದ ರಿಸ್ಕ್ ತೆಗೆದುಕೊಳ್ಳುತ್ತಾರೆ. ಯಡಿಯೂರಪ್ಪ ಅವರು ಒಂದು ಶಕ್ತಿ ಇದ್ದಂತೆ. ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಸಿದ್ದರಾಮಯ್ಯ ವಿಜಯೇಂದ್ರ ಒಳ ಒಪ್ಪಂದ ಆರೋಪ ವಿಚಾರವಾಗಿ‘ ನಮಗೆ ಸಿದ್ದರಾಮಯ್ಯ ಜೊತೆ ಒಳ ಒಪ್ಪಂದ ಅವಶ್ಯಕತೆ ಇಲ್ಲ. ವರುಣ ಜನ ನನ್ನನ್ನು ರಾಜ್ಯಕ್ಕೆ ಪರಿಚಯ ಮಾಡಿಸಿದವರು. ವರುಣ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಈ ಬಾರಿ ವರುಣ ಮತದಾರರು ಬದಲಾವಣೆ ಬಯಸಿದ್ದಾರೆ. ಮತ್ತೆ ವರುಣಾಗೆ ನಾನು ಪ್ರಚಾರಕ್ಕೆ ಬರುತ್ತೇನೆ ಎಂದರು.