ಮನೆ ರಾಜಕೀಯ ಕಾಂಗ್ರೆಸ್ಸಿಗರಿಗೆ ಶಕ್ತಿ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ: ಕೆ.ಎಸ್.ಈಶ್ವರಪ್ಪ

ಕಾಂಗ್ರೆಸ್ಸಿಗರಿಗೆ ಶಕ್ತಿ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ: ಕೆ.ಎಸ್.ಈಶ್ವರಪ್ಪ

0

ಶಿವಮೊಗ್ಗ : ಕಾಂಗ್ರೆಸ್ಸಿಗರಿಗೆ ಶಕ್ತಿ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲಿ. ಪಕ್ಷದಿಂದ ಅವರನ್ನು ಅಮಾನತುಗೊಳಿಸಲಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಹಿಂದು ಪದಕ್ಕೆ ಅಶ್ಲೀಲ ಅರ್ಥವಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಂದು ಎನ್ನುವ ಪದ, ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಮಾತು ಆಡದಿದ್ದರೇ ಕೆಲವರಿಗೆ ತಿಂದ ಅನ್ನ ಕರಗುವುದಿಲ್ಲ. ಸತೀಶ ಜಾರಕಿಹೊಳಿ ಹೇಳಿಕೆಯನ್ನು ಸುರ್ಜಿತ್ ವಾಲಾ ಖಂಡನೆ ಮಾಡಿದ್ದಾರೆ. ಅವರು ಹೇಳಿದ ಮೇಲೂ ನನ್ನ ಮಾತಿಗೆ ಬದ್ದ ಎಂದು ಜಾರಕಿಹೊಳಿ ಸೊಕ್ಕಿನ ಮಾತಾಡಿದ್ದಾರೆ ಎಂದು ಹರಿಹಾಯ್ದರು.

ಸೋನಿಯಾಗಾಂಧಿ ಹಾಗೂ ಮುಸಲ್ಮಾನರನ್ನು ಮೆಚ್ಚಿಸಲು ಸತೀಶ ಜಾರಕಿಹೊಳಿ ಈ ರೀತಿ ಮಾತನಾಡುತ್ತಿದ್ದಾರೆ. ವಾಲ್ಮೀಕಿ ರಕ್ತ ಹಂಚಿಕೊಂಡು ಜಾರಕಿಹೊಳಿ ಹುಟ್ಟಿದ್ದಾರೆ. ಮೊದಲು ಹಿಂದುಗಳ ಕ್ಷಮೆ ಕೇಳಬೇಕು. ಕ್ಷಮೆ ಕೇಳದಿದ್ದರೆ ಮುಂದಿನ ಚುನಾವಣೆಯಲ್ಲಿ ಹಿಂದುಗಳು ಅವರಿಗೆ ಬುದ್ದಿ ಕಲಿಸುತ್ತಾರೆ ಎಂದರು.

ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಬಾದಾಮಿಗೆ ಹೋದರು. ಈಗ ಬಾದಾಮಿಯಲ್ಲಿ ಸೋಲ್ತೀನಿ ಅಂತಾ ಗೊತ್ತಾಗಿ ಬೇರೆ ಕ್ಷೇತ್ರ ಹುಡುಕಾಡುತ್ತಿದ್ದಾರೆ. ಅವರು ಗೆಲ್ಲೋದು ಕಷ್ಟ, ಇನ್ನು ಖರ್ಗೆ ಅವರಿಗೆ ಏನು ಕೊಡುಗೆ ಕೊಡ್ತಾರೆ ? ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಹಿಂದಿನ ಲೇಖನನಿವೃತ್ತ ಗುಪ್ತಚರ ಇಲಾಖೆ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರ ಬಂಧನ
ಮುಂದಿನ ಲೇಖನಹುಲುಗಿನ ಮುರುಡಿಯ ವೆಂಕಟರಮಣಸ್ವಾಮಿ ದೇವಾಲಯ