ಮನೆ ರಾಜಕೀಯ ಸಿದ್ದರಾಮಯ್ಯ ಹರಕೆಯ ಕುರಿಯಾಗಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ಹರಕೆಯ ಕುರಿಯಾಗಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

0

ಕಲಬುರಗಿ: ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸೇಫ್ ಅಲ್ಲ. ಒಂದು ವೇಳೆ ಅವರು ಅಲ್ಲಿಂದ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಲ್ಬುರ್ಗಿಯ ಕಡಣಿ ಗ್ರಾಮದಲ್ಲಿ ಮಾತನಾಡಿದ ಅವರು,  ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೋಲಾರದಲ್ಲಿ ನಿಲ್ಲಿಸುವ ಮೂಲಕ ಅವರ ಪಕ್ಷದವರೆ ಅವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದರು.

ನಾನು ಕೋಲಾರದಲ್ಲಿ ಸುತ್ತಿ ಜನರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಕೋಲಾರ ಜಿಲ್ಲೆಯ ಕಾಂಗ್ರೆಸ್ ನಾಯಕರಿಗೆ ಮತ ಪಡೆಯುವ ಶಕ್ತಿ ಇಲ್ಲ. ಅದಕ್ಕಾಗಿ ಬಲವಂತವಾಗಿ ಸಿದ್ದರಾಮಯ್ಯ ಅವರನ್ನು ನಿಲ್ಲಿಸಿದ್ದಾರೆ. ಸಿದ್ದರಾಮಯ್ಯರನ್ನು ದೇವರೇ ಕಾಪಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಹಿಂದಿನ ಲೇಖನಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ: ಸಚಿವ ಸಿಸಿ ಪಾಟೀಲ್ ಖಂಡನೆ
ಮುಂದಿನ ಲೇಖನಛತ್ತೀಸಗಢದಲ್ಲಿ ಐಇಡಿ ಸ್ಫೋಟ: ಸಿಆರ್‌’ಪಿಎಫ್ ಸಿಬ್ಬಂದಿಗೆ ಗಾಯ