ಮೈಸೂರು: ಈ ಬಾರಿ ಕಾಂಗ್ರೆಸ್ ಗೆ ಬಹುಮತ ಬರಲಿದ್ದು, ವರುಣಾ ಕ್ಷೇತ್ರದಲ್ಲಿ ನಾನು ಗೆಲುವು ಸಾಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಅಂತಾ ಹೇಳಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 130ರಿಂದ 150 ಸ್ಥಾನ ಗೆಲ್ಲುತ್ತೆ. ಕರಾವಳಿ ಭಾಗದಲ್ಲೂ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.
ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ . ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದು ಕಿಡಿಕಾರಿದರು.














