ಮನೆ ರಾಜಕೀಯ ಗುಂಬಜ್ ಮಾದರಿ ಬಸ್ ನಿಲ್ದಾಣ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ: ಪ್ರತಾಪ್ ಸಿಂಹ ಎಚ್ಚರಿಕೆ

ಗುಂಬಜ್ ಮಾದರಿ ಬಸ್ ನಿಲ್ದಾಣ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ: ಪ್ರತಾಪ್ ಸಿಂಹ ಎಚ್ಚರಿಕೆ

0

ಮೈಸೂರು(Mysuru): ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನ.13ರಂದು ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದೆ.  ಬಸ್​ ನಿಲ್ದಾಣಗಳ ಮೇಲೆ ಗುಂಬಜ್​​ ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್​ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೇ  ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಹೇಳಿದ್ದಾರೆ.

ಗುಂಬಜ್ ಮೇಲೆ ಕಳಶ ಪ್ರತಿಷ್ಟಾಪನೆ”

ಸಂಸದ ಪ್ರತಾಪಸಿಂಹ ವಿಡಿಯೋ ವೈರಲ್ ಆದ ಬೆನ್ನಲ್ಲೇ . ಶಾಸಕ ಎಸ್​ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಬಸ್ ಶೆಲ್ಟರ್ ರೂಪ ಬದಲಾಗಿದೆ. ಇದೀಗ ಬಸ್ ಶೆಲ್ಟರ್ ‘ನ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ.

ಹಿಂದಿನ ಲೇಖನತನ್ವೀರ್ ಸೇಠ್ ಎನ್.ಆರ್.ಕ್ಷೇತ್ರದ ಜನರ ಭವಿಷ್ಯ ನಿರ್ಮಿಸಲಿ: ಎಸ್.ಎ.ರಾಮದಾಸ್
ಮುಂದಿನ ಲೇಖನಸಿಬಿಐ ನಿರ್ದೇಶಕ ಜೈಸ್ವಾಲ್ ಅಧಿಕಾರಾವಧಿ ವಿಸ್ತರಿಸುವ ಸುಗ್ರೀವಾಜ್ಞೆ ಪ್ರಶ್ನಿಸಿ ಬಾಂಬೆ ಹೈಕೋರ್ಟ್’ಗೆ ಅರ್ಜಿ