ಮನೆ ರಾಜ್ಯ ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ – ಸಿದ್ದರಾಮಯ್ಯಗೆ ಕುಮಾರಸ್ವಾಮಿ ಚಾಲೆಂಜ್..!

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ – ಸಿದ್ದರಾಮಯ್ಯಗೆ ಕುಮಾರಸ್ವಾಮಿ ಚಾಲೆಂಜ್..!

0

ಮೈಸೂರು : ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು ಎಂಬುದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ಮೂಲಕ ಓಪನ್‌ ಚಾಲೆಂಜ್‌ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, 1999ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದರು. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಅಲ್ಲದೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು.