ಚಾಮರಾಜನಗರ: ಶ್ರೀ ಸಾಮಾನ್ಯರಿಗೆ ತೊಂದರೆಯಾದರೆ ಸರ್ಕಾರಿ ನೌಕರರಿಗೆ ಒಳ್ಳೆಯದಾಗಲ್ಲ ನೌಕರರ ಸಮಸ್ಯೆ ಆದಷ್ಟು ಬೇಗ ಪರಿಹಾರವಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ನೌಕರರನ್ನು ಅಣ್ಣತಮ್ಮಂದಿರಂತೆ ನೋಡಿಕೊಂಡಿದೆ. ಎಲ್ಲಾ ರೀತಿಯ ಸೌಲಭ್ಯ ನೀಡಲಾಗಿತ್ತು. ಯಾವುದೇ ಮುಷ್ಕರಕ್ಕೆ ಅವಕಾಶ ಕೊಟ್ಟಿರಲಿಲ್ಲ. ಇದು ಚುನಾವಣಾ ಸಂದರ್ಭ. ಇಂತಹ ಸಂದರ್ಭದಲ್ಲಿ ಮುಷ್ಕರ ಮಾಡಿದ್ರೆ ಸರ್ಕಾರ ಬಗ್ಗುತ್ತೆ ಎಂಬುದು ಅವರ ನಂಬಿಕೆ. ಎಂದು ಹೇಳಿದರು.
ಯಡಿಯೂರಪ್ಪ ಮತ್ತು ಬೊಮ್ಮಾಯಿ ಅಣ್ಣತಮ್ಮಂದಿರಂತೆ ಇದ್ದಾರೆ. ಯಡಿಯೂರಪ್ಪ ಅವರು ಕಾಂಗ್ರೆಸ್ ಆರೋಪ ಮಾಡುವಷ್ಟು ನೀಚ ಮಟ್ಟಕ್ಕೆ ಹೋಗಲ್ಲ. ಯಡಿಯೂರಪ್ಪ ಅವರ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಎಲ್ಲಾ ರೀತಿಯ ಅನುಕೂಲ ಮಾಡಿಕೊಟ್ಟಿದ್ದಾರೆ. ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡುವವರು ಯಾವ ಪಾಪ ಕೂಪಕ್ಕೆ ಹೋಗ್ತಾರೋ ಗೊತ್ತಿಲ್ಲ. ಸರ್ಕಾರಿ ನೌಕರರ ಮುಷ್ಕರಕ್ಕೆ ಯಡಿಯೂರಪ್ಪ ಅವರ ಜೊತೆ ಸಂಬಂಧ ಕಲ್ಪಿಸುವ ನೀಚತನಕ್ಕೆ ಕಾಂಗ್ರೆಸ್ ಇಳಿಯಬಾರದಿತ್ತು ಎಂದು ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಇದಕ್ಕೂ ಮುನ್ನ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಮಲೆಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.