ಮನೆ ರಾಜಕೀಯ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಬೇಡ ಅನ್ನೋಕಾಗುತ್ತಾ?: ಪರಮೇಶ್ವರ್

ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಬೇಡ ಅನ್ನೋಕಾಗುತ್ತಾ?: ಪರಮೇಶ್ವರ್

0

ತುಮಕೂರು: ಹೈಕಮಾಂಡ್ ನನಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಬೇಡ ಅನ್ನುವುದಕ್ಕೆ ಆಗುತ್ತದಾ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.

Join Our Whatsapp Group

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಬೇಕು ಎಂದು ಜಿಲ್ಲೆಯ ಅಭಿಮಾನಿಗಳ ಅಪೇಕ್ಷೆ ಇದೆ ಎಂದ ತಕ್ಷಣ ಅದು ಸಾಧ್ಯ ಆಗೋದಿಲ್ಲ ಎಂದು ಹೇಳಿದ್ದಾರೆ.

ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗಲ್ಲ, ಕೆಲವೊಮ್ಮೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ.  ಎಕ್ಸಿಟ್ ಪೋಲ್ ನಲ್ಲಿ ಕಾಂಗ್ರೆಸ್ ಮುಂದಿದೆ. ಕಾಂಗ್ರೆಸ್ ಪರ ಅಲೆ ಇರೋದು ಸಾಬೀತಾಗಿದೆ. ಇನ್ನು ಏನಿದ್ದರೂ ಸಂಖ್ಯೆಯ ದೃಢೀಕರಣ ಅಷ್ಟೇ ಬಾಕಿ. ನಾವು 130 ಸ್ಥಾನ ಪಡೆಯುತ್ತೇವೆ. ಸರ್ಕಾರ ರಚನೆ ಮಾಡಲು ನಾವು ಮಾನಸಿಕವಾಗಿ ಸಿದ್ಧರಾಗಿದ್ದೇವೆ ಎಂದು ಹೇಳಿದರು.

ಸಿದ್ದರಾಮಯ್ಯ ಕೂಡ ವರುಣಾದಲ್ಲಿ ಯಾವುದೇ ತೊಂದರೆ ಇಲ್ಲದೇ ಗೆಲ್ಲುತ್ತಾರೆ. ನಾನು ಕೂಡ ಕೊರಟಗೆರೆಯಲ್ಲಿ ಹಿಂದಿಗಿಂತ ಹೆಚ್ಚಿನ ಬಹುಮತದಲ್ಲಿ ಗೆಲ್ಲುತ್ತೇನೆ. 2013ರಲ್ಲಿ ನಾನು 120 ಸೀಟ್ ಬರುವ ಮುನ್ಸೂಚನೆ ಕೊಟ್ಟಿದ್ದೆ. ಆದರೆ 122 ಸ್ಥಾನ ಬಂದಿತ್ತು. ಈಗ ನಾನು 130 ಸ್ಥಾನ ಎಂದು ಹೇಳಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಆಯ್ಕೆಯು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು. ಸಿಎಲ್ ಪಿ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಯಾರು ಒಳ್ಳೆ ಆಡಳಿತ ಕೊಡುತ್ತಾರೋ ಅಂತವರನ್ನು ಹೈಕಮಾಂಡ್ ಸಿಎಂ ಮಾಡಬಹುದು.  ಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿ ಹಲವು ಮಂದಿ ಇದ್ದಾರೆ. ಅವರಲ್ಲಿ ಯಾರಿಗೆ ಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ
ಮುಂದಿನ ಲೇಖನಚಲಿಸುತ್ತಿದ್ದ ಕಾರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಪ್ರಮುಖ ಆರೋಪಿ ಬಂಧನ