ಮನೆ ರಾಜಕೀಯ ರಾಜ್ಯಗಳು ಪ್ರಗತಿ ಸಾಧಿಸಿದರೆ ದೇಶ ಅಭಿವೃದ್ಧಿ: ಪ್ರಧಾನಿ ಮೋದಿ

ರಾಜ್ಯಗಳು ಪ್ರಗತಿ ಸಾಧಿಸಿದರೆ ದೇಶ ಅಭಿವೃದ್ಧಿ: ಪ್ರಧಾನಿ ಮೋದಿ

0

ಬೆಂಗಳೂರು(Bengaluru): ರಾಜ್ಯಗಳು ಪ್ರಗತಿ ಸಾಧಿಸಿದರೆ ದೇಶವೂ ಅಭಿವೃದ್ಧಿ ಹೊಂದುತ್ತದೆ. ಈ ದಿಸೆಯಲ್ಲಿ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಹೆಚ್ಚು ಅನುಕೂಲಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಗರದ ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ ಇನ್ವೆಸ್ಟ್ ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ವರ್ಚ್ಯುಯಲ್ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.

ಆಡಳಿತ ವ್ಯವಸ್ಥೆಯಲ್ಲಿ ಕೆಂಪುಪಟ್ಟಿಗೆ ವಿದಾಯ ಹೇಳಿ, ಹೂಡಿಕೆದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕು. ಹೂಡಿಕೆ ಸ್ನೇಹಿ ವಾತಾವರಣ ಸೃಷ್ಟಿಸಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದಕ್ಕಾಗಿ ನಮ್ಮ ಸರ್ಕಾರ 1,500 ಹಳೆಯ ಮತ್ತು ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಿದೆ. ದೇಶವು ಈಗ ಡಿಜಿಟಲ್ ಕ್ರಾಂತಿಯ ಹಾದಿಯಲ್ಲಿದೆ. ಅದಕ್ಕೆ ಪೂರಕವಾಗಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ಪ್ರಧಾನಿ ಹೇಳಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಸ್ಪರ್ಧಾತ್ಮಕ ಮತ್ತು ಸಹಕಾರ ಒಕ್ಕೂಟ ವ್ಯವಸ್ಥೆಯ ಭಾಗ. ಜಗತ್ತಿನ ಹಲವು ರಾಷ್ಟ್ರಗಳ ಹೂಡಿಕೆದಾರರು ರಾಜ್ಯವೊಂದರಲ್ಲಿ ಹಲವು ಸಾವಿರ ಕೋಟಿ‌ ರೂಪಾಯಿಗಳ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇದರಿಂದ ದೇಶಕ್ಕೆ ಮತ್ತಷ್ಟು ವಿದೇಶಿ ನೇರ ಬಂಡವಾಳ ಹರಿದು ಬರಲಿದೆಇನ್ನೂ ಎಂದರು.

ಹೆಚ್ಚು ಪ್ರಮಾಣದ ವಿದೇಶಿ ನೇರ ಹೂಡಿಕೆ ಆಕರ್ಷಿಸುವುದಕ್ಕಾಗಿಯೇ ಹೊಸ ಹೊಸ ಕ್ಷೇತ್ರಗಳಲ್ಲಿ ಎಫ್‌’ಡಿಐಗೆ ಅನುಮತಿ‌ ನೀಡಲಾಗಿದೆ. ರಕ್ಷಣಾ ಕ್ಷೇತ್ರದಲ್ಲೂ ವಿದೇಶಿ ಹೂಡಿಕೆಗೆ ಸಮ್ಮತಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಹಿಂದಿನ ಲೇಖನಜಾಗತಿಕ  ಬಂಡವಾಳ ಹೂಡಿಕೆದಾರರ ಸಮಾವೇಶ : ವರ್ಚುಯಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ
ಮುಂದಿನ ಲೇಖನರಸ್ತೆ ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಯುವಕನ ಅಂಗಾಂಗ ದಾನ