ಮನೆ ರಾಜಕೀಯ ನೇರ ಸಾಲ, ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿ ಮಧ್ಯವರ್ತಿಗಳ ಹಾವಳಿ ಕಂಡು ಬಂದರೆ ಅಧಿಕಾರಿಗಳೇ ನೇರ...

ನೇರ ಸಾಲ, ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿ ಮಧ್ಯವರ್ತಿಗಳ ಹಾವಳಿ ಕಂಡು ಬಂದರೆ ಅಧಿಕಾರಿಗಳೇ ನೇರ ಹೊಣೆ – ಸಚಿವ  ಶಿವರಾಜ ತಂಗಡಗಿ

0

ಮೈಸೂರು: ನೇರ ಸಾಲ ಹಾಗೂ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿ ಮಧ್ಯವರ್ತಿಗಳ ಹಾವಳಿ ಕಂಡು ಬಂದರೆ ಅಧಿಕಾರಿಗಳನ್ನು ನೇರ ಹೊಣೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ  ಶಿವರಾಜ ತಂಗಡಗಿ ಎಚ್ಚರಿಸಿದ್ದಾರೆ.

Join Our Whatsapp Group

ಅವರು ಇಂದು ಮೈಸೂರಿನ ಜೀಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು ಕಂದಾಯ ವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ಜಿಲ್ಲೆಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡುತ್ತಿದ್ದರು.

ಸ್ವಯಂ ಉದ್ಯೋಗ , ನೇರ ಸಾಲ ಯೋಜನೆಯ ಸಾಲದ ಮೊತ್ತ ಐವತ್ತು ಸಾವಿರದಿಂದ ಎರಡು ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಈ ಬಗ್ಗೆ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಿ ಅರ್ಜಿ ಸಲ್ಲಿಸುವವರ ಸಂಖ್ಯೆಯಲ್ಲಿ ಹೆಚ್ಚಳ ಮಾಡಬೇಕು ಎಂದು ಅವರು ಸೂಚಿಸಿದರು.

ಹಾಗೆಯೇ ಗಂಗಾ ಕಲ್ಯಾಣ ಯೋಜನೆಯ ಘಟಕ ವೆಚ್ಚವನ್ನು ಎರಡು ಲಕ್ಷ ರೂಪಾಯಿಯಿಂದ 3.75 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ, ಇದರಿಂದ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಸಹಾಯಧನದ ಮೊತ್ತ 3.25 ಲಕ್ಷ, ಸಾಲ 50,000 ದೊರೆಯಲಿದೆ ಎಂದು ಅವರು ತಿಳಿಸಿದರು.

ಇದರ ಬಗ್ಗೆಯೂ ಸಹ ಸಾರ್ವಜನಿಕರಿಗೆ ವ್ಯಾಪಕವಾಗಿ ತಿಳಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ,ಈ ಸಂಬಂಧ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲು ಮುಂದಾಗಬೇಕು ಎಂದು ಅವರು ಹೇಳಿದರು.

ಮುಂದಿನ 45 ದಿವಸಗಳ ಒಳಗೆ ಎಲ್ಲಾ ಯೋಜನೆಗಳ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಅಧಿಕಾರಿಗಳು ಸಂಬಂಧ ಪಟ್ಟ ಶಾಸಕರನ್ನು ಸಂಪರ್ಕ ಮಾಡಿ ಪಡೆಯಲೇಬೇಕು ಡಿಸೆಂಬರ್ ಅಂತ್ಯದ ಒಳಗೆ ನಿಗದಿತ ಗುರಿ ಸಾಧಿಸಬೇಕು ಮತ್ತು ಶೇ. ನೂರರಷ್ಟು ಅನುದಾನದ ಬಳಕೆ ಆಗಬೇಕು ಎಂದು ಸಚಿವ ಶಿವರಾಜ ತಂಗಡಗಿ ಸೂಚಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ, ತುಳಸಿ ಮದ್ದಿನೇನಿ ಹಾಗು ಎಲ್ಲ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಾಜರಿದ್ದರು.