ಮನೆ ರಾಜಕೀಯ ಟಿಪ್ಪು ಪ್ರತಿಮೆ ಸ್ಥಾಪಿಸಿದರೆ ಬಾಬರಿ ಮಸೀದಿಯಂತೆ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್

ಟಿಪ್ಪು ಪ್ರತಿಮೆ ಸ್ಥಾಪಿಸಿದರೆ ಬಾಬರಿ ಮಸೀದಿಯಂತೆ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್

0

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದರೆ ಬಾಬರಿ ಮಸೀದಿಯಂತೆ ಅದನ್ನು ಸಹ ಧ್ವಂಸ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಟಿಪ್ಪು ಕರ್ನಾಟಕಕ್ಕೇ ಕಳಂಕ. ಮೈಸೂರು ಮಹಾರಾಜರಿಗೆ ಅವಮಾನವಾಗುವಂತೆ ಅಲ್ಲಿಯೇ ಆಡಳಿತ ನಡೆಸಿದ್ದ. ಒಂದು ವೇಳೆ ಅವನ ಮೂರ್ತಿ ಪ್ರತಿಷ್ಠಾಪಿಸಿದ್ದೇ ಆದರೆ, ಅದನ್ನು ಒಡೆದು ಹಾಕುತ್ತೇವೆ. ಅವನ ಮೂರ್ತಿ ಪ್ರತಿಷ್ಠಾಪಿಸುವಂಥ ಕೆಟ್ಟ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಬೇಕಾದರೆ, ಸಂತ ಶಿಶುನಾಳ‌ ಷರೀಫ್, ಅಬ್ದುಲ್ ಕಲಾಂ‌ ಅಂತವರ ಮೂರ್ತಿ ಪ್ರತಿಷ್ಠಾಪಿಸಿ ಎಂದು ಸಲಹೆ ನೀಡಿದರು.

ಸಾವಿರಾರು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿದ, ಹಿಂದುಗಳನ್ನು ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಜಯಂತಿ ಇಲ್ಲಿನ ಈದ್ಗಾ ಮೈದಾನದಲ್ಲಿ ಆಚರಿಸಿದ್ದು ಅಕ್ಷಮ್ಯ ಅಪರಾಧ. ಟಿಪ್ಪು ಜಯಂತಿ ಆಚರಿಸಿ ಮೈದಾನವನ್ನು ಅಪವಿತ್ರಗೊಳಿಸಲಾಗಿತ್ತು. ಇದೀಗ ನಾವು ಗೋಮೂತ್ರದಿಂದ ಶುದ್ಧ ಮಾಡಿ, ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.