ಮನೆ ರಾಜ್ಯ ಜಾತಿ ಬಗ್ಗೆ ಸರ್ಕಾರದ ಜೊತೆ ಹೋರಾಟ ಮಾಡಬೇಕಿದ್ದರೆ ಕಾವಿ ಬಿಚ್ಚಿಟ್ಟು ಮಾಡಿ: ಶ್ರೀ ಬಸವ ಜಯಮೃತ್ಯುಂಜಯ...

ಜಾತಿ ಬಗ್ಗೆ ಸರ್ಕಾರದ ಜೊತೆ ಹೋರಾಟ ಮಾಡಬೇಕಿದ್ದರೆ ಕಾವಿ ಬಿಚ್ಚಿಟ್ಟು ಮಾಡಿ: ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ತೀವ್ರ ವಾಗ್ದಾಳಿ

0

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂಬ ಹೋರಾಟವನ್ನು ಮತ್ತೇ ತೀವ್ರಗೊಳಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಿಜಯಪುರದ ಪರಿಶ್ರಮ ಮಹಿಳಾ ಸಾಂತ್ವನ ಸಂಸ್ಥೆಯ ಅಧ್ಯಕ್ಷೆ ವಿದ್ಯಾ ಪಾಟೀಲ್ ಎಂಬುವವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾವು ಬಸವಣ್ಣನವರ ಹೆಸರಿನಲ್ಲಿ ಕಾವಿ ಧರಿಸಿದನ್ನು ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮರೆತಿದ್ದಾರೆ. ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡುವುದಕ್ಕೆ ನಿಮಗೆ ಯಾವ ಅರ್ಹತೆ ಇಲ್ಲ. ಬಸವಣ್ಣನವರಿಗೆ ಯಾವುದೇ ಜಾತಿ ಇಲ್ಲ, ನಿಮಗೆ ಜಾತಿ ಬಗ್ಗೆ ಸರ್ಕಾರದ ಜೊತೆ ಹೋರಾಟ ಮಾಡಬೇಕಿದ್ದರೆ ಕಾವಿ ಬಿಚ್ಚಿಟ್ಟು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ ಮಾಡುವುದಾದರೆ, ಕೂಡಲ ಸಂಗಮವನ್ನು ಖಾಲಿ ಮಾಡಬೇಕೆಂದು ಒತ್ತಾಯಿಸಿರುವ ಮಹಿಳೆ, ಬಸವಣ್ಣನ ಐಕ್ಯ ಸ್ಥಳದಲ್ಲಿದ್ದ ನೀವು, ಮಾಡುತ್ತಿರುವುದನ್ನು ಜನರಿಗೆ ತಿಳಿಸಬೇಕಿದೆ ಎಂದು ವಾಗ್ದಾಳಿ ನಡೆಸಿದ್ದು, ನಿಮ್ಮ ವರ್ತನೆ ಉಳಿದ ಸ್ವಾಮೀಜಿಗಳ ಹೆಸರನ್ನು ಕೆಡಿಸುವಂತಾಗಿದೆ. ಕಾರಣ ಮುಂದಿನ ದಿನಗಳಲ್ಲಿ ನೀವು ರಾಜಕೀಯ ಮಾಡೋದಾಗಲಿ, ಬೀದಿಗೆ ಬಂದು ಹೋರಾಟ ಮಾಡೋದಾಗಲಿ ಮಾಡಬಾರದು.

ಆದರೂ ಕೂಡ ನೀವು ಯಾವುದೇ ಸ್ಥಳದಲ್ಲಿ ಸತ್ಯಾಗ್ರಹ ಮಾಡಿದರೆ ಅಲ್ಲೇ ಬಂದು ಚಪ್ಪಲಿ ಸೇವೆ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ವಾಮೀಜಿ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದ ವಿದ್ಯಾ ಪಾಟೀಲ್ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಂಘದ ಬಸವನಬಾಗೇವಾಡಿ ತಾಲುಕಾ ಆಧ್ಯಕ್ಷ ಬಸವರಾಜ ಗೋಳಸಂಗಿ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ಕುರಿತು ತನಿಖೆ ನಡೆದಿದೆ.