ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಇದೇ ಮೇ 25, 2023ರೊಳಗೆ ಅರ್ಜಿ ಹಾಕಿ. ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್’ನಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್’ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್’ನಲ್ಲಿ ಬಿ.ಟೆಕ್, ಎಂ.ಟೆಕ್, ಎಂ.ಎಸ್ ಪೂರ್ಣಗೊಳಿಸಿರಬೇಕು.
ಅನುಭವ:
ಅಭ್ಯರ್ಥಿಗಳು ಜಾವಾ/ ಪೈಥಾನ್/ ಸಿ/ ಸಿ++ ಪ್ರೋಗ್ರಾಮಿಂಗ್ ಅನುಭವ ಇರಬೇಕು.
ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಧಾರವಾಡ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 30, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 25, 2023
ಆಯ್ಕೆ ಪ್ರಕ್ರಿಯೆ ನಡೆಯುವ ದಿನ: ಮೇ 30, 2023