ಮನೆ ಉದ್ಯೋಗ ಐಐಟಿ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಐಐಟಿ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Join Our Whatsapp Group

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಇದೇ ಮೇ 25, 2023ರೊಳಗೆ ಅರ್ಜಿ ಹಾಕಿ. ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್’ನಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ಅರ್ಹತೆ:

ಇಂಡಿಯನ್ ಇನ್’ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್’ನಲ್ಲಿ ಬಿ.ಟೆಕ್, ಎಂ.ಟೆಕ್, ಎಂ.ಎಸ್ ಪೂರ್ಣಗೊಳಿಸಿರಬೇಕು.

ಅನುಭವ:

ಅಭ್ಯರ್ಥಿಗಳು ಜಾವಾ/ ಪೈಥಾನ್/ ಸಿ/ ಸಿ++ ಪ್ರೋಗ್ರಾಮಿಂಗ್ ಅನುಭವ ಇರಬೇಕು.

ವೇತನ:

ಮಾಸಿಕ ₹ 31,000

ಉದ್ಯೋಗದ ಸ್ಥಳ:

ಧಾರವಾಡ

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಮೇ 30, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/05/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 25, 2023

ಆಯ್ಕೆ ಪ್ರಕ್ರಿಯೆ ನಡೆಯುವ ದಿನ: ಮೇ 30, 2023

ಹಿಂದಿನ ಲೇಖನರಾಹು ಗೋಚಾರ: ಈ ರಾಶಿಯವರಿಗೆ ಬೇಡ ಅಂದ್ರೂ ದುಡ್ಡು..!
ಮುಂದಿನ ಲೇಖನಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ?: ಸುಧಾಕರ್ ಪ್ರಶ್ನೆ