ಗುವಾಹಟಿ: ಗುವಾಹಟಿಯ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಬಿಟೆಕ್ ಮೊದಲ ವರ್ಷದ ವಿದ್ಯಾರ್ಥಿ ಬುಧವಾರ ರಾತ್ರಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಅವರ ಕೊಠಡಿಯಿಂದ ಪತ್ರವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ ತನ್ನ ರೂಮ್ ಮೇಟ್ ಇಲ್ಲದ ಸಮಯದಲ್ಲಿ ವಿದ್ಯಾರ್ಥಿ ದುಡುಕಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಬಿಹಾರ ಮೂಲದ ವಿದ್ಯಾರ್ಥಿಯ ಕುಟುಂಬದವರು ಸಂಸ್ಥೆಯ ನಿರ್ಲಕ್ಷ್ಯದಿಂದ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಒತ್ತಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾವು ಎಲ್ಲಾ ಸಂಭಾವ್ಯ ಕೋನಗಳನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 10 ರಂದು ಐಐಟಿ ಗುವಾಹಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯೊಬ್ಬನ ಸಾವಿನ ದುರದೃಷ್ಟಕರ ಸುದ್ದಿಯನ್ನು ಹಂಚಿಕೊಳ್ಳಲು ನೋವಾಗುತ್ತಿದೆ ಎಂದು ಐಐಟಿ ಗುವಾಹಟಿ ಹೇಳಿದೆ.