ಬೆಂಗಳೂರು(Bengaluru): ಸಾರ್ವಜನಿಕ ಶಿಕ್ಷಣ ಇಲಾಖೆ 2012–13 ಹಾಗೂ 2014–15ನೇ ಸಾಲಿನಲ್ಲಿ ನಡೆಸಿದ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ಅಧಿಕಾರಿಗಳು 38 ಸಹ ಶಿಕ್ಷಕರನ್ನು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ 24, ಬೆಂಗಳೂರು ದಕ್ಷಿಣ ವಿಭಾಗದ 5, ಚಿಕ್ಕಬಳ್ಳಾಪುರ ಜಿಲ್ಲೆಯ 3 ಹಾಗೂ ಚಿತ್ರದುರ್ಗ ಜಿಲ್ಲೆಯ 5 ಸಹ ಶಿಕ್ಷಕರು ಸೇರಿದಂತೆ ಒಟ್ಟು 38 ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಬಹುತೇಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ವಿಧಾನಸೌಧ ಠಾಣೆಯಲ್ಲಿ ಕಳೆದ ಆಗಸ್ಟ್ನಲ್ಲಿ ಪ್ರಕರಣ ದಾಖಲಾಗಿತ್ತು. ಸಿಐಡಿ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ.
Saval TV on YouTube