ಹನೂರು: ಅಕ್ರಮವಾಗಿ ಗಂಧದ ಮರವನ್ನು ಕಟಾವು ಮಾಡಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿದ್ದು, ನಾಪತ್ತೆಯಾಗಿರುವ ಮತ್ತೋರ್ವನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಚಂದು (19) ಎಂಬಾತ ಬಂಧಿತ ಆರೋಪಿಯಾಗಿದ್ದು, ಪಚ್ಚೆದೊಡ್ಡಿ ಗ್ರಾಮದ ಮಹೇಶ( 25) ಪರಾರಿಯಾಗಿರುವ ಆರೋಪಿ.
ಈ ಇಬ್ಬರು ಆರೋಪಿಗಳು ಕಾಂಚಳ್ಳಿ ಗ್ರಾಮದ ಮುತ್ತಮ್ಮ ಎಂಬವರ ಜಮೀನಿನಲ್ಲಿ ಬೆಳೆದಿದ್ದ ಗಂಧದ ಮರವನ್ನು ಯಾವುದೇ ಅನುಮತಿ ಇಲ್ಲದೆ ಕಟಾವು ಮಾಡಿದ್ದರು ಎನ್ನಲಾಗಿದೆ.
ಈ ಸಂಬಂಧ ದೊರೆತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಗಂಧದ ತುಂಡು ಮತ್ತು ಬೇರುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
Saval TV on YouTube