ಮೈಸೂರು: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಮಾರಾಟ ಮಾಡಲು ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಾತಗಳ್ಳಿ ಗ್ರಾಮದ ಬಳಿ ವಶಕ್ಕೆ ಪಡೆದಿದ್ದು, ಒಂದು ಕೆ.ಜಿ. 555ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಮೈಸೂರು ಜಿಲ್ಲಾ ಪೊಲೀಸ್ ಸೆನ್ (ಸೈಬರ್ ಕ್ರೈಂ ಠಾಣೆ) ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪುರುಷೋತ್ತಮ್ ಮತ್ತು ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ವಶಕ್ಕೆ ಪಡೆದರು.
ಈ ಕೃತ್ಯಕ್ಕೆ ಬಳಸಿದ್ದ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ. ಈ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಪೊಲೀಸ್ ಅಧೀಕ್ಷಕರಾದ ಸೀಮಾಲಾಟ್ಕರ್ ಶ್ಲಾಘಿಸಿದ್ದಾರೆ.
Saval TV on YouTube