ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಆಮ್ ಆದ್ಮಿ ಪಕ್ಷದ ನಾಯಕ ಅಮಾನತುಲ್ಲಾ ಖಾನ್ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಶೋಧಿಸುತ್ತಿದೆ.
ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿದ ಎಫ್ ಐಆರ್ ಆಧರಿಸಿ ಎಎಪಿ ನಾಯಕ ವಿರುದ್ಧ ಇಡಿ ಅಕ್ರಮ ಹಣ ವರ್ಗಾವಣೆಯ ತನಿಖೆಯನ್ನು ಆರಂಭಿಸಿದೆ.
ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ ಖಾನ್ ಅವರನ್ನು ಕಳೆದ ವರ್ಷ ಎಸಿಬಿ ಬಂಧಿಸಿತ್ತು ನಂತರ ಸೆಪ್ಟೆಂಬರ್ ನಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದರು, ಇದೀಗ ಮತ್ತೆ ಜಾರಿ ನಿರ್ದೇಶನಾಲಯ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
Saval TV on YouTube