ಮನೆ ರಾಜಕೀಯ ಪಿಎಸ್’ಐ ನೇಮಕಾತಿ ಅಕ್ರಮ: ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಸಿದ್ದರಾಮಯ್ಯ ಒತ್ತಾಯ

ಪಿಎಸ್’ಐ ನೇಮಕಾತಿ ಅಕ್ರಮ: ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಸಿದ್ದರಾಮಯ್ಯ ಒತ್ತಾಯ

0

ಬೆಂಗಳೂರು(Bengaluru): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ  ಕುರಿತು ಟ್ವೀಟ್ ಮಾಡಿರುವ ಅವರು, ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಅಮೃತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ‌ಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. ಉಪ್ಪು ತಿಂದವರು ನೀರು ಕುಡಿಯಲಿ ಎಂದು ತಿಳಿಸಿದ್ದಾರೆ.