ಮನೆ ಸ್ಥಳೀಯ ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮ ಸೈಟ್ ಹಂಚಿಕೆ: ಮುಡಾ ಮಾಜಿ ಆಯುಕ್ತ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ...

ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮ ಸೈಟ್ ಹಂಚಿಕೆ: ಮುಡಾ ಮಾಜಿ ಆಯುಕ್ತ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ

0

ಮೈಸೂರು: ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ ಆರೋಪ ಸಂಬಂಧ ಮುಡಾದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ.

Join Our Whatsapp Group

75225 ಚದರ ಅಡಿ ಜಾಗವನ್ನು ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ನೀಡಿದ ಆರೋಪ ಕೇಳಿಬಂದಿದ್ದು, ಹಿಂದಿನ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಅಕ್ರಮ ಎಸಗಿರುವ ಆರೋಪ ಇದಾಗಿದೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ದೂರುದಾರರೂ ಆಗಿರುವ ಸ್ನೇಹಮಯಿ ಕೃಷ್ಣ, ನಿವೃತ್ತ ಶಿಕ್ಷಕ ಶಾಂತಪ್ಪರಿಂದ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಇದೀಗ ಕ್ರಮ ಕೈಗೊಂಡಿರುವ ಸರ್ಕಾರ, 3 ದಿನದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಮುಡಾ 50:50 ಹಗರಣದಲ್ಲಿ ನಿಯಮಬಾಹಿರವಾಗಿ ಸೈಟ್​ಹಂಚಿಕೆ ವಿಚಾರವಾಗಿ ಮುಡಾದ ಮಾಜಿ ಆಯುಕ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕೆ.ಲತಾ ಆದೇಶಿಸಿದ್ದಾರೆ. ಈ ಸಂಬಂಧ ಜ.10 ರಂದೇ ಮುಡಾದ ಆಯುಕ್ತ ರಘುನಂದನ್ ಅವರಿಗೆ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ.

ಭೂಮಿ ನೀಡಿದ ಅಂದಿನ ಆಯುಕ್ತರು, ಅಧಿಕಾರಿಗಳು, ನಗರ ಯೋಜನಾ ಕಾರ್ಯದರ್ಶಿ, ಅವರ ಜನ್ಮದಿನಾಂಕ, ವಿಳಾಸ, ನಿವೃತ್ತರಾಗಿದ್ದರೆ ಮನೆ ವಿಳಾಸ ನೀಡಿ. ಪ್ರಾಧಿಕಾರದ ಹಿತಾಸಕ್ತಿಗೆ ವಿರುದ್ಧವಾಗಿ ದಿನೇಶ್ ಕುಮಾರ್ ನಡೆದುಕೊಂಡಿದ್ದಾರೆ. ದಿನೇಶ್ ಕುಮಾರ್ ಗಂಭೀರವಾದ ಕರ್ತವ್ಯಲೋಪ ಎಸಗಿದ್ದಾರೆ. ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಜವಬ್ದಾರಿಯುತ ಸರ್ಕಾರಿ ನೌಕರನ ರೀತಿ ನಡೆದುಕೊಂಡಿಲ್ಲ. ಕರ್ನಾಟಕ‌ ನಾಗರೀಕ ಸೇವಾ ನಿಯಮಗಳು-1957 ರ‌ ಅಧಿನಿಯಮದ ಅಡಿ ಶಿಸ್ತುಕ್ರಮ ಜರುಗಿಸಲು ಅನುವಾಗುವಂತೆ ದೋಷಾರೋಪ ಸಲ್ಲಿಸಿ. ಮೂಲ ಅಥವಾ ದೃಢೀಕೃತ ಪ್ರತಿಗಳೊಂದಿಗೆ ಸರ್ಕಾರಕ್ಕೆ ಕಳುಹಿಸಿ ಎಂದು ಕೆ.ಲತಾ ಅವರಿಂದ ಮುಡಾ ಆಯುಕ್ತ ರಘುನಂದನ್​​ಗೆ ಪತ್ರ ಕಳುಹಿಸಲಾಗಿದೆ.

ಈ ಮಧ್ಯೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಲೋಕಾಯುಕ್ತ ತನಿಖಾ ವರದಿ ಸಿದ್ಧಗೊಂಡಿದೆ. ಮೈಸೂರು ಲೋಕಾಯುಕ್ತ ಎಸ್​ಪಿ ನೇತೃತ್ವದಲ್ಲಿ ಅಕ್ರಮದ ತನಿಖೆ ನಡೆದಿದ್ದು, 3,000ಕ್ಕೂ ಹೆಚ್ಚು ಪುಟಗಳ ವರದಿ ಸಿದ್ಧಪಡಿಸಲಾಗಿದೆ. ಕೋರ್ಟ್ ನೀಡಿದ್ದ ಗಡುವಿನ ಒಳಗೆ ವರದಿ ಸಲ್ಲಿಸಲು ಲೋಕಾಯಕ್ತ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್ ನೀಡಲಾಗಿದೆ.