ಗುಂಡ್ಲುಪೇಟೆ(ಚಾಮರಾಜನಗರ): ಅಕ್ರಮವಾಗಿ ಕೇರಳಕ್ಕೆ ಎಮ್ಮೆಗಳನ್ನು ಲಾರಿ ಮೂಲಕ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ ನಡೆಸಿ 9 ಎಮ್ಮೆಗಳನ್ನು ರಕ್ಷಣೆ ಮಾಡಿ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ಎಮ್ಮೆ ಸಾಗಾಣೆ ಮಾಡುತ್ತಿದ್ದ ಅಶ್ರಫ್, ಇರ್ಫಾನ್, ಸಿಹಾಬ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಮತ್ತೋರ್ವ ಆರೋಪಿ ಕೃಷ್ಣ ಸ್ಥಳದಿಂದ ಓಡಿ ಹೋಗಿದ್ದಾನೆ. ತಮಿಳುನಾಡು ನೋಂದಣಿಯ ಲಾರಿಯಲ್ಲಿ ಅಕ್ರಮವಾಗಿ ಎಮ್ಮೆಗಳನ್ನು ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗುಂಡ್ಲುಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ಕಿರಣ್ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ಸಮೇತ 9 ಎಮ್ಮೆಗಳನ್ನು ವಶಕ್ಕೆ ಪಡೆದು ಮೂವರನ್ನು ಬಂಧಿಸಲಾಗಿದೆ.
ಇನ್ನೂ ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














