ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮಹಾಮೈತ್ರಿಕೂಟ ಸಭೆ ಆಯೋಜಿಸಿದ್ದು, ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿಲ್ಲ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಹಾಘಟಬಂಧನ್ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿ ಮಹಾಘಟಬಂಧನ್ ಇದೆ. ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟರೂ ಕೊಡದಿದ್ದರೂ ತಲೆಕೆಡಿಸಿಕೊಳ್ಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಎನ್ ಡಿಎ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿದ ಹೆಚ್.ಡಿಕೆ, ಇನ್ನೂ ದಿನಗಳಿವೆ ನೋಡೊಣ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಹೇಳಿದರು.