ವಾಷಿಂಗ್ಟನ್ : ನಾನು ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ತಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮಗೆ ತಾವೇ ಬೆನ್ನುತಟ್ಟಿಕೊಂಡಿದ್ದಾರೆ. ಜೊತೆಗೆ ಇದನ್ನೆಲ್ಲ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ ಎಂದು ಹೇಳಿದ್ದಾರೆ.
ಭಾನುವಾರ ರಾತ್ರಿ ಗಾಜಾಕ್ಕೆ ಮಧ್ಯಪ್ರಾಚ್ಯಕ್ಕೆ ತೆರಳುವ ಮುನ್ನ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಭಾರತ-ಪಾಕ್ ಸಂಘರ್ಷ ಸೇರಿದಂತೆ ಅನೇಕ ಯುದ್ಧಗಳನ್ನು ನಿಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ.
ಇಸ್ರೇಲ್-ಗಾಜಾ ಕದನ ವಿರಾಮ ನಾನು ಪರಿಹರಿಸಿದ 8 ಯುದ್ಧ. ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ. ನಾನು ಹಿಂದಿರುಗುವಾಗ ಅದನ್ನೂ ಪರಿಹರಿಸುತ್ತೇನೆ. ನಾನು ಯುದ್ಧಗಳನ್ನು ಪರಿಹರಿಸುವಲ್ಲಿ ನಿಪುಣ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ ಎನ್ನಲಾಗಿದೆ.















