ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ವಿದ್ಯಾರ್ಥಿ ಬೆನೆಡಿಕ್ಟ್ ಸಾಬು ಬಂಧಿತ ಆರೋಪಿ.
ಬೆನೆಡಿಕ್ಟ್ ಕೇರಳದ ಇಡುಕಿ ಮೂಲದವನಾಗಿದ್ದು, 6 ತಿಂಗಳ ಹಿಂದೆ ಜಿಎನ್ ಎಂ ಕೋರ್ಸ್ ಗೆ ಸೇರಿದ್ದ ಬೆನೆಡಿಕ್ಟ್ ಸಾಬು ತಾನು ಕೇರಳದ ಕೃಷಿ ಅಧಿಕಾರಿ ಎಂದು ಪ್ರಿನ್ಸಿಪಾಲ್ ಬಳಿ ಹೇಳಿದ್ದ. ಬಳಿಕ ಸಬ್ ಇನ್ಸ್ ಪೆಕ್ಟರ್ ಎಂದು ಹೇಳಿಕೊಂಡಿದ್ದ.
ಸದ್ಯ RAW ಫೀಲ್ಡ್ ಏಜೆಂಟ್ ಆಗಿರುವುದಾಗಿ ಹೇಳಿಕೊಂಡಿದ್ದ. ಕಾಲೇಜಿನಲ್ಲಿ ಡ್ರಗ್ಸ್ ಅವೇರ್ ನೆಸ್ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯ ಕಳ್ಳಾಟ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಬೆನೆಡಿಕ್ಟ್ ಪೊಲೀಸ್ ಸಮವಸ್ತ್ರವನ್ನು ಹೊಲಿಸಿಕೊಂಡಿದ್ದ. ಅನುಮಾನಗೊಂಡು ಉರ್ವಾ ಠಾಣಾ ಪೊಲೀಸರು ವಿದ್ಯಾರ್ಥಿ ಬೆನೆಡಿಕ್ಟ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತನಿಂದ ನಕಲಿ ಐಡಿ ಕಾರ್ಡ್ ಗಳು ಪೊಲೀಸ್ ಸಮವಸ್ತ್ರ, ಮೊಬೈಲ್ ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದಾರೆ.