ಮನೆ ಆರೋಗ್ಯ ರಾಜ್ಯದಲ್ಲಿ ಕೊರೋನಾ ತಡೆಗಟ್ಟಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿಗಳ ಜಾರಿ: ಡಾ.ಕೆ.ವಿ.ರಾಜೇಂದ್ರ

ರಾಜ್ಯದಲ್ಲಿ ಕೊರೋನಾ ತಡೆಗಟ್ಟಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿಗಳ ಜಾರಿ: ಡಾ.ಕೆ.ವಿ.ರಾಜೇಂದ್ರ

0

ಮೈಸೂರು(Mysuru): ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೊರೋನಾ ತಡೆಗಟ್ಟಲು ರಾಜ್ಯ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಸಾರ್ವಜನಿಕರು ಮಾರ್ಗಸೂಚಿಗಳನ್ನು ಪಾಲಿಸುವುದು ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಧಿತಿಯಲ್ಲಿ ಪಾಲಿಸಬೇಕಾದ ಶಿಷ್ಠಾಚಾರ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸುವುದು, ಎಲ್ಲಾ ತೀವ್ರ ನೆಗಡಿ, ಕೆಮ್ಮು, ಜ್ವರ (ಐಎಲ್’ಐ/ಸಾರಿ) ಪ್ರಕರಣಗಳನ್ನು ಪರೀಕ್ಷೆ ಮಾಡುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಶೇ.2ರಷ್ಟು ಪ್ರಯಾಣಿಕರನ್ನು ರ‍್ಯಾಂಡಮ್ ಟೆಸ್ಟಿಂಗ್ ಮಾಡುವುದು, ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಮೀಸಲಿಡುವುದು, ಎಲ್ಲರಿಗೂ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವುದು, ಕೇಂದ್ರ ಸರ್ಕಾರದ ಜೊತೆ ನೇರ ಸಂಪರ್ಕದಲ್ಲಿದ್ದು ಲಸಿಕಾಕರಣ ಹೆಚ್ಚಿಸುವುದು ಈ ಎಲ್ಲಾ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಸಮರ್ಥವಾಗಿ ನಿರ್ವಹಣೆ ಮಾಡಲು ಮುಂದಾಗಬೇಕು ಎಂದು ಅವರು ತಿಳಿಸಿದರು.

ಮುಚ್ಚಿದ ಸಂರಕ್ಷಣೆಗಳಾದ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾಹಾಲ್‌’ಗಳು, ಶಾಪಿಂಗ್ ಮಾಲ್ ಕಛೇರಿಗಳು ಸೇರಿದಂತೆ ಬಸ್.ರೈಲು, ವಿಮಾನ ಯಾನ ಸಂದರ್ಭಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅರ್ಹರೆಲ್ಲರೂ ಕೋವಿಡ್ -19 ಲಸಿಕೆಯ ಮುನ್ನೆಚ್ಚರಿಕಾ ಡೋಸ್‌’ಗಳನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ವಿಶೇಷವಾಗಿ ತಡೆಯಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಬಿ.ಆರ್.ಪೂರ್ಣಿಮಾ, ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಮಿಕಾಂತರೆಡ್ಡಿ, ಅಪರ ಜಿಲ್ಲಾಧಿಕಾರಿಗಳಾದ ಡಾ.ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಕೆ.ಹೆಚ್.ಪ್ರಸಾದ್ ಸೇರಿಂದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಐಪಿಎಲ್: ಆಟಗಾರರ ಮಿನಿ ಹರಾಜು ಪ್ರಕ್ರಿಯೆ
ಮುಂದಿನ ಲೇಖನಅಮೃತ ಸರೋವರ ಕೆರೆ ಅಂಗಳದಲ್ಲಿ ಜಲ ಸಂಜೀವಿನಿ: ರೈತ ಸಂವಾದ