ಮನೆ ರಾಜಕೀಯ ‘ಮೀಸಲಾತಿ ಗಿಮಿಕ್’ ಅನುಷ್ಠಾನ ಮಾಡುವುದು ಅಸಾಧ್ಯ: ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

‘ಮೀಸಲಾತಿ ಗಿಮಿಕ್’ ಅನುಷ್ಠಾನ ಮಾಡುವುದು ಅಸಾಧ್ಯ: ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

0

ಬೆಂಗಳೂರು: ನಿಮ್ಮ ‘ಮೀಸಲಾತಿ ಗಿಮಿಕ್’ ಅನುಷ್ಠಾನ ಮಾಡುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜನತೆಗೆ ಈಗ ನಿಮ್ಮ ಉತ್ತರವೇನು, ಸಾಬೂಬುಗಳೇನು’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

Join Our Whatsapp Group

ಮೀಸಲಾತಿ ವಿಚಾರ ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಜಯಂತಿ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಬೆತ್ತಲುಗೊಳಿಸಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‌ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ ತುಪ್ಪ ಸವರುವ ನಿರ್ಧಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ರಾಜ್ಯದ ಬಿಜೆಪಿ ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ. ‘ಅನುಷ್ಠಾನ ಅಸಾಧ್ಯ’ ಎಂಬುದು ಸುಪ್ರೀಂ ಹೇಳುವ ಮೂಲಕ ಬಿಜೆಪಿಯ ಕಿವಿ ಮೇಲೆ ಹೂವು ಇಡುವ ಪ್ರಯತ್ನವನ್ನು ಬಯಲುಗೊಳಿಸಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ.