ಮನೆ ರಾಜ್ಯ ದುಬಾರೆ ದುರಂತ ಬೆನ್ನಲ್ಲೇ; ಸಕ್ರೆಬೈಲು ಆನೆ ಬಿಡಾರಕ್ಕೆ, ತಾತ್ಕಾಲಿಕ ಬಂದ್..!

ದುಬಾರೆ ದುರಂತ ಬೆನ್ನಲ್ಲೇ; ಸಕ್ರೆಬೈಲು ಆನೆ ಬಿಡಾರಕ್ಕೆ, ತಾತ್ಕಾಲಿಕ ಬಂದ್..!

0

ಶಿವಮೊಗ್ಗ : ಈಚೆಗೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೊಸ ಎಸ್‌ಒಪಿ ನಿಯಮಗಳು ಜಾರಿಗೆ ಬರುವವರೆಗೆ ಈ ನಿರ್ಬಂಧ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ, ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇರುವ ಸಕ್ರೆಬೈಲು ಆನೆ ಬಿಡಾರಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಭೇಟಿ ನೀಡುತ್ತಿದ್ದರು.

ದುಬಾರೆ ಆನೆ ಬಿಡಾರದಲ್ಲಿ ಕೆಲವು ದಿನಗಳ ಹಿಂದೆ ಸಾಕಾನೆಗಳ ನಡುವೆ ಕಾಳಗ ನಡೆದಿತ್ತು. ಈ ವೇಳೆ ತಮಿಳುನಾಡಿನ ಮಹಿಳಾ ಪ್ರವಾಸಿಯೊಬ್ಬರು ಮೃತಪಟ್ಟಿದ್ದರು. ಕಾಳಗದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಹೆಸರಿನ ಸಾಕಾನೆಯೂ ಮರುದಿನ ಮೃತಪಟ್ಟಿತ್ತು. ಈ ಘಟನೆ ಹಿನ್ನೆಲೆ ರಾಜ್ಯದ ಎಲ್ಲಾ ಆನೆ ಬಿಡಾರಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.