ಮನೆ ಕಾನೂನು ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ

ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ

0

ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ  ಮೇಲೆ ಇಡಿ ದಾಳಿ ನಡೆಸಲಾಗಿದೆ.

ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆರ್.ಎಂ. ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಆರ್.ಎಂ.ಎಂ. ಅವರ ಮೂರು ನಿವಾಸಿಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.

ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದಾರೆ. ಸರ್ಕಾರಿ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಆರ್.ಎಂ.ಎಂ. ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

5 ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಪದೇ ಪದೇ ಕೇಸು ಮುಂದೂಡಿಕೆಗೆ ಇನ್ನು ಮುಂದೆ ಅವಕಾಶವಿಲ್ಲ
ಮುಂದಿನ ಲೇಖನಅರಮನೆಯಲ್ಲಿ ನಡೆಯುವ ಶರನ್ನವರಾತ್ರಿ ಉತ್ಸವದ ವೇಳಾಪಟ್ಟಿ ಇಂತಿದೆ