ಮನೆ ರಾಜ್ಯ ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ನಡುವಿ‌ನ ದಶಪಥಗಳ ಹೆದ್ದಾರಿ ಉದ್ಘಾಟನೆ

ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ನಡುವಿ‌ನ ದಶಪಥಗಳ ಹೆದ್ದಾರಿ ಉದ್ಘಾಟನೆ

0

ರಾಮನಗರ: ಫೆಬ್ರುವರಿ ಅಂತ್ಯದಲ್ಲಿ ಬೆಂಗಳೂರು-ಮೈಸೂರು ನಡುವಿ‌ನ ದಶಪಥಗಳ ಹೆದ್ದಾರಿಯನ್ನು  ಉದ್ಘಾಟಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ಹೆದ್ದಾರಿ ಕಾಮಗಾರಿ ವೀಕ್ಷಣೆ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಇಲ್ಲವೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗುವುದು ಎಂದರು.

ಹೊಸ ಹೆದ್ದಾರಿಯು ಕರ್ನಾಟಕದ ಆರ್ಥಿಕ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ. ಕೈಗಾರಿಕೆಗಳ ಪ್ರಗತಿಗೆ ಅನುಕೂಲ ಆಗಲಿದೆ ಎಂದರು.

ಹಿಂದಿನ ಲೇಖನಆರ್’ಎನ್’ಐ ನೋಂದಣಿಯಾದ ಕನ್ನಡ ಪತ್ರಿಕೆಗಳ ವಿವರ
ಮುಂದಿನ ಲೇಖನಮತದಾರರ ಪಟ್ಟಿ ಪರಿಷ್ಕರಣೆ: ಅಂತಿಮ ಮತದಾರರ ಪಟ್ಟಿ ಪ್ರಕಟ:  ಡಾ.ಕೆ.ವಿ.ರಾಜೇಂದ್ರ